Tuesday, October 13, 2026
Tuesday, October 13, 2026

ಕೋವಿಡ್-19 ಜನಜಾಗೃತಿ ಮತ್ತು ಪರಿಹಾರ ಆಂದೋಲನ

ಕೋವಿಡ್-19 ಜನಜಾಗೃತಿ ಮತ್ತು ಪರಿಹಾರ ಆಂದೋಲನ

Date:

ನಿಟ್ಟೆ: ಪಡಿ ಸಂಸ್ಥೆ ಮಂಗಳೂರು, ನಿಟ್ಟೆ ಗ್ರಾಮ ಪಂಚಾಯತ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ‌ಇಂದು ಕೋವಿಡ್-19 ಜನಜಾಗೃತಿ ಮತ್ತು ಪರಿಹಾರ ಆಂದೋಲನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಸತೀಶ್ ಇವರು ಫಲಾನುಭವಿಗಳಿಗೆ ಕೋವಿಡ್ ಪರಿಹಾರ ಕಿಟ್ ವಿತರಣೆಗೆ ಚಾಲನೆ ನೀಡಿದ ಪಡಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.

ಪಡಿ ಸಂಸ್ಥೆಯ ಉಡುಪಿ ಜಿಲ್ಲಾ ಸಂಯೋಜಕರಾದ ವಿವೇಕ್ ಇವರು ಕೋವಿಡ್-19ರ ಸಾಂಕ್ರಾಮಿಕ ಸೋಂಕು ಕಾಯಿಲೆ ಬಂದ ನಂತರ ಜನಜೀವನ ಅಸ್ತವ್ಯಸ್ತವಾಗಿದ್ದು ಕೆಲವರು ತಮ್ನ ಕಟುಂಬಗಳನ್ನೆ ಕಳೆದುಕೊಂಡಿದ್ದಾರೆ ಮತ್ತು ಆರ್ಥಿಕ ಸಂಕಷ್ಟವನ್ನು ಅನುಭವಿಸಿದ್ದಾರೆ. ಉಡುಪಿ ಜಿಲ್ಲೆಯ 6 ಗ್ರಾಮ ಪಂಚಾಯತ್ ಮತ್ತು 3 ಮುನ್ಸಿಪಾಲಿಟಿಗಳಲ್ಲಿ ಈ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಜಿಲ್ಲೆಯ ಒಟ್ಟು 288 ಫಲಾನುಭವಿಗಳಿಗೆ ಪರಿಹಾರ ನೀಡುವ ಯೋಜನೆ ಹಾಕಲಾಗಿದೆ ಎಂದು ತಮ್ಮ ಪ್ರಸ್ತಾವಿಕ ಮಾತಿನಲ್ಲಿ ಹೇಳಿದರು.

ನಿಟ್ಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಮತಿ ಆಚಾರ್ತಿ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ದಿವಾಕರ್ ಕುಮಾರ್, ದಯಾನಂದ ಶೆಟ್ಟಿ, ಕಾರ್ಕಳ ತಾಲೂಕು ಎಸ್.ಡಿ.ಎಮ್.ಸಿ ಸಮನ್ವಯ ವೇದಿಕೆ ಅಧ್ಯಕ್ಷರಾದ ಪ್ರಕಾಶ್ ಕೋಟ್ಯಾನ್, ಶಿಕ್ಷಣ ಸಂಪನ್ಮೂಲ ಕೇಂದ್ರ ಕಾರ್ಕಳ ಸದಸ್ಯರಾದ ಶೋಭಾ ಭಾಸ್ಕರ್, ರೇಷ್ಮಾ, ಪಡಿ ಸಂಸ್ಥೆ ಮಂಗಳೂರು ವಕಲಾತ್ತು ಸಂಯೋಜಕರಾದ ಡೆನಿಸ್ ಡಿಸೋಜ, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲೆ

ಬೆಂಗಳೂರು, ಅ.12: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್...

ಅಮೇರಿಕನ್ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರಿಗೆ 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.12: 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಮೇರಿಕನ್ ಅರ್ಥಶಾಸ್ತ್ರಜ್ಞರಾದ...

ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ, ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ...
error: Content is protected !!