Saturday, August 29, 2026
Saturday, August 29, 2026

ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ

ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ

Date:

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟುವ ಕುರಿತು ಸಾರ್ವಜನಿಕರು ನಿಯಮಾವಳಿಗಳನ್ನು ಪಾಲಿಸದೇ ಇರುವುದು ಕಂಡುಬರುತ್ತಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಕಟ್ಟುನಿಟ್ಟಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ವಾಣಿಜ್ಯ ಮಳಿಗೆಗಳು, ಮಾಲ್‌ಗಳು ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಪ್ರವೇಶ ದ್ವಾರದಲ್ಲಿ ತಾಪಮಾನ ಪರಿಶೀಲಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ರೋಗ ಲಕ್ಷಣ ಇರುವವರಿಗೆ ಪ್ರವೇಶ ನೀಡಬಾರದು.

ತಪ್ಪಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ಹಾಗೂ ಭಾರತ ದಂಡ ಸಂಹಿತೆ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಇದ್ದಲ್ಲಿ ನಗರಸಭೆಯ ವತಿಯಿಂದ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!