ಉಡುಪಿ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಇದರ ಉದ್ಫಾಟನಾ ಸಮಾರಂಭ ಇಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಆಂಗಾರ ಅವರು, ಪ್ರಧಾನಿಯವರ ಆಶಯದಂತೆ ಅತ್ಯಂತ ಕಡಿಮೆ ದರದಲ್ಲಿ ರೋಗಿಗಳಿಗೆ ಔಷಧ ನೀಡುವ ಈ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ.
ಸ್ವಾತಂತ್ರ್ಯದ ಅಮ್ರತ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ಈ ಕೇಂದ್ರ ಪ್ರಾರಂಭಗೊಂಡಿರುವುದು ಸಂತೋಷಕರ ಎಂದರು. ಶಾಸಕ ಕೆ.ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಜಯಂಟ್ಸ್ ಕೇಂದ್ರ ಸಮಿತಿ ಸದಸ್ಯ ದಿನಕರ ಅಮೀನ್, ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು, ಫೆಡರೇಶನ್ ಉಪಾಧ್ಯಕ್ಷ ರಮೇಶ್ ಪೂಜಾರಿ, ವಲಯ ನಿರ್ದೇಶಕ ಲಕ್ಷೀಕಾಂತ್ ಮುಂತಾದವರಿದ್ದರು.
ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಾಥ್ ಕೋಟ, ನಿರ್ದೇಶಕರುಗಳಾದ ರವಿರಾಜ್ ಹೆಚ್ ಪಿ., ವಿವೇಕ್ ಕಾಮತ್, ಅಣ್ಣಯ ದಾಸ್, ರೋನಾಲ್ಡ್’ ಮಿಲ್ಟನ್, ಸುನೀತಾ ಮಧುಸೂಧನ್ ಮುಂತಾದವರು ಉಪಸ್ಥಿತರಿದ್ದರು. ರಾಘವೇಂದ್ರ ಕರ್ವಾಲು ಕಾರ್ಯಕ್ರಮ ನಿರೂಪಿಸಿದರು. ಕಟ್ಟಡ ನಿರ್ಮಾಣದಲ್ಲಿ ಸಹಕರಿಸಿದ ಅಶೋಕ್ ಮತ್ತು ಜಿಲ್ಲಾ ಸರ್ಜನ್ ರನ್ನು ಗೌರವಿಸಲಾಯಿತು.