ಮಲ್ಪೆ: ಡಾ. ಎಸ್.ಆರ್. ರಂಗನಾಥನ್ ಜನ್ಮದಿನಚಾರಣೆಯ ಅಂಗವಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗು ಗ್ರಂಥಪಲಕ ಗಣಪತಿ ಭಟ್ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲೂ ಕೂಡಾ ಉನ್ನತ ಶಿಕ್ಷಣದಲ್ಲಿ ಗ್ರಂಥಾಲಯ ಮಹತ್ವಪೂರ್ಣ ಮತ್ತು ಹೊಸ ಆಯಾಮವನ್ನು ಪಡೆದುಕೊಂಡಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ., ಭಾರತದ ಗೃಂಥಾಲಯಗಳ ಆಧುನೀಕರಣ ಮತು ಬೆಳವಣಿಗೆಗೆ ಮಹತ್ವಪೂರ್ಣ ಕೊಡುಗೆ ಸಲಿಸಿದ್ದ ಡಾ. ಎಸ್.ಆರ್. ರಂಗನಾಥನ್ ರವರ ಜೀವನ ಮತ್ತು ಕೊಡುಗೆಗಳು ಶ್ಲಾಘನೀಯ. ವಿದ್ಯಾರ್ಥಿಗಳು ತರಗತಿ ಹೊರತುಪಡಿಸಿ ಉಳಿದ ಸಮಯವನ್ನು ಗ್ರಂಥಾಲಯದಲ್ಲಿ ಕಳೆದಲ್ಲಿ ಖಂಡಿತಾ ಭವಿಷ್ಯ ಉಜ್ವಲವಾಗುವುದು ಎಂದರು.
ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಧಾಕೃಷ್ಣ, ಕಾರ್ಯಕ್ರಮ ಆಯೋಜಿಸಿದ ಕಾಲೇಜಿನ ಗ್ರಂಥಪಾಲಕ ಕೃಷ್ಣ ಸಾಸ್ತಾನ ಹಾಗೂ ಗ್ರಂಥಾಲಯ ಸಹಾಯಕಿಯರಾದ ಸುನೀತಾ ಮತ್ತು ಪ್ರಮೀಳಾ ಉಪಸ್ಥಿತರಿದ್ದರು.
ರಾಜಕೀಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ್ ಎನ್. ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗ ಉಪನ್ಯಾಸಕ ಅಶೋಕ್ ವಂದಿಸಿದರು. ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಮನೀಷಾ ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕೃತಿಗಳ ಪುಸ್ತಕ ಪ್ರದರ್ಶನ ನಡೆಯಿತು. ಬೋಧಕ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.