ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ವಿಭಾಗ ಇವರ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಡೆದ ಕುಣಿದಾಡೋ ಕೃಷ್ಣ ಕುಣಿದಾಡೋ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಕೃಷ್ಣನ ವೇಷ ಮತ್ತು ನೃತ್ಯ ಸ್ಪರ್ಧೆಯ ವಿಜೇತರಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಬಹುಮಾನ ವಿತರಿಸಿದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಕೆ. ರಘುಪತಿ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನೃತ್ಯ ಸ್ಪರ್ಧೆಯ ವಿಜೇತರು: ಉಡುಪಿಯ ಸೃಷ್ಠಿ ನೃತ್ಯ ಕಲಾ ಕುಟೀರ ಪ್ರಥಮ, ಮುನಿಯಾಲ್ ಆಯುರ್ವೇದಿಕ್ ಮೆಡಿಕಲ್ ಸೈನ್ಸ್ ಕಾಲೇಜು ದ್ವಿತೀಯ ಹಾಗೂ ಮೂಡುಬಿದಿರೆಯ ಆಳ್ವಾಸ್ ತೃತೀಯ.
ಕೃಷ್ಣನ ವೇಷ ಸ್ಪರ್ಧೆಯ ವಿಜೇತರು: ಮಂಗಳೂರು ನಂದ ಗೋಕುಲ ಶ್ವೇತಾ ಅರೆಹೊಳೆ ಪ್ರಥಮ, ಉಡುಪಿಯ ಸೃಷ್ಠಿ ನೃತ್ಯ ಕಲಾ ಕುಟೀರದ ಜಾನಕಿ ದ್ವಿತೀಯ ಹಾಗೂ ಉಡುಪಿ ಅಮ್ಮುಂಜೆಯ ಶ್ರೀ ಭ್ರಾಮರಿ ನಾಟ್ಯಾಲಯದ ಯಶಸ್ವಿ ತೃತೀಯ.