Wednesday, December 4, 2024
Wednesday, December 4, 2024

ವಿಶ್ವ ಛಾಯಾಗ್ರಹಣ ದಿನ- ಕಾರ್ಯಕ್ರಮಗಳ ಸಮ್ಮಿಲನ

ವಿಶ್ವ ಛಾಯಾಗ್ರಹಣ ದಿನ- ಕಾರ್ಯಕ್ರಮಗಳ ಸಮ್ಮಿಲನ

Date:

ಉಡುಪಿ: ಛಾಯಾಚಿತ್ರದಲ್ಲಿನ ನೈಪುಣ್ಯತೆ, ವೈಜ್ಞಾನಿಕತೆ, ತಾಂತ್ರಿಕತೆ, ಭಾವನಾತ್ಮಕ ಸಂವೇದನಾಶೀಲತೆ ಇವೆಲ್ಲವನ್ನೂ ನಾವು ಗುರುತಿಸಿಕೊಂಡಾಗ ಮಾತ್ರ ಛಾಯಾಗ್ರಹಣ ಎನ್ನುವುದು ಎಷ್ಟು ವಿಶಿಷ್ಟವಾದದ್ದು ಎಂಬ ಅರಿವು ನಮಗೆ ಆಗುತ್ತದೆ.

ಹಾಗಾಗಿ ಛಾಯಾಗ್ರಹಣ ವೃತ್ತಿ ಮಾಡುವ ಎಲ್ಲ ಛಾಯಾಗ್ರಾಹಕರು ಅಭಿನಂದನಾರ್ಹರು ಎಂದು ಉಡುಪಿ ರೋಟರಿ ರೋಯಲ್ ನ ಅಧ್ಯಕ್ಷ ಬಾಲಕೃಷ್ಣ ಮದ್ದೋಡಿ ಅಭಿಪ್ರಾಯಪಟ್ಟರು.

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ, ರೋಟರಿ ಉಡುಪಿ ರೋಯಲ್ ಸಂಯುಕ್ತವಾಗಿ ಆಯೋಜಿಸಿದ್ದ ವಿಶ್ವ ಛಾಯಾಗ್ರಹಣ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒಂದು ಕ್ಷಣದ ಸುಂದರ ಛಾಯಾಚಿತ್ರಕ್ಕಾಗಿ ಗಂಟೆಗಟ್ಟಲೆ, ದಿನಗಟ್ಟಲೆ, ವರ್ಷಗಟ್ಟಲೆ ಪೂರ್ತಿ ಕಾದು ಅದನ್ನು ವಿಶಿಷ್ಟ ರೀತಿಯಲ್ಲಿ ನಮಗೆ ಒಪ್ಪಿಸುವ ಛಾಯಾಗ್ರಾಹಕರ ಕಾರ್ಯ ಮೆಚ್ಚುವಂತದ್ದು ಎಂದರು..

ಇನ್ನೋರ್ವ ಅತಿಥಿ ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಮಾತನಾಡಿ, ನಮ್ಮ ಛಾಯಾಗ್ರಹಣ ಕ್ಷೇತ್ರದಲ್ಲಿ ನಮ್ಮತನವನ್ನು ಕಂಡುಕೊಂಡು, ಸಾಮಾಜಿಕವಾಗಿ ಕೂಡಾ ನಾವು ಮುಂದೆ ಬರಬೇಕೆಂದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಹಫೀಜ್ ರೆಹಮಾನ್, ಜಯಕರ ಸುವರ್ಣ, ಕಾರ್ಯದರ್ಶಿ ಪ್ರವೀಣ್ ಕೊರೆಯ ಉಪಸ್ಥಿತರಿದ್ದರು.

ಹಿರಿಯ ಛಾಯಾಗ್ರಾಹಕ ಜಗನ್ನಾಥ ಶೆಟ್ಟಿ, ಹಾಗೂ ಚಂದ್ರಶೇಖರ್ ಅಂಬಲಪಾಡಿ ಇವರಿಗೆ ಛಾಯಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಡೆದ ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಯೋಧ ಬಾಲರಾಜ್ ರವರನ್ನು ಅಭಿನಂದಿಸಲಾಯಿತು .

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಉಡುಪಿ ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಸ್ವಾಗತಿಸಿದರು. ಪ್ರಸ್ತಾವನೆಯ ರೂಪದಲ್ಲಿ ಪೂರ್ಣಿಮಾ ಜನಾರ್ದನ್ ಕವನ ವಾಚಿಸಿದರು.

ಕೋಶಾಧ್ಯಕ್ಷ ದಿವಾಕರ ಹಿರಿಯಡ್ಕ ವಂದಿಸಿದರು. ರಾಘವೇಂದ್ರ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!