Sunday, January 19, 2025
Sunday, January 19, 2025

ಸರ್ವಧರ್ಮದ ಸತ್ವ ನಾರಾಯಣಗುರುಗಳ ತತ್ವ: ಡಾ. ಗಣನಾಥ ಎಕ್ಕಾರು

ಸರ್ವಧರ್ಮದ ಸತ್ವ ನಾರಾಯಣಗುರುಗಳ ತತ್ವ: ಡಾ. ಗಣನಾಥ ಎಕ್ಕಾರು

Date:

ಮಲ್ಪೆ: 19ನೇ ಶತಮಾನದ ದಾರ್ಶನಿಕ, ಮಾನವತಾವಾದಿ, ಬ್ರಹ್ಮಶ್ರೀ ನಾರಾಯಣಗುರುಗಳು ನೀಡಿದ ಸಂದೇಶ ಒಂದು ಕಾಲ, ಜಾತಿ, ಮತ, ಧರ್ಮಕ್ಕೆ ಸೀಮಿತವಾಗದೆ, ಸಾರ್ವಕಾಲಿಕ ಸತ್ಯದೊಂದಿಗೆ ಸರ್ವಧರ್ಮಗಳ ತತ್ವವನ್ನು ಜಗತ್ತಿಗೆ ಸಾರಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

ಅವರು, ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇವರ ಸಹಯೋಗದಲ್ಲಿ ನಡೆದ ಗುರುನಡೆ ಗ್ರಾಮದೆಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಅವರು ಪೀಠ ಹಾಗೂ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಸ್ವಾಗತಿಸಿದರು.

ನಾರಾಯಣಗುರುಗಳು ಕಂಡ ದೇವರು ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ಉಪನ್ಯಾಸಕ ಮತ್ತು ಸಂಘಟಕ ದಯಾನಂದ ಕರ್ಕೇರ ಉಗ್ಗೆಲ್‌ಬೆಟ್ಟು ಅವರು ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ತತ್ವವನ್ನು ನಾರಾಯಣಗುರುಗಳು ಬೋಧಿಸಿದ್ದು ಮಾತ್ರವಲ್ಲ ಅದನ್ನು ಸಾಮಾಜಿಕವಾಗಿ ಸಾಕಾರಗೊಳಿಸಿದರು. ಸಮಾನ ಸಮಾಜ ವ್ಯವಸ್ಥೆಯನ್ನು ರೂಪಿಸುವಲ್ಲಿ ಅವರು ಸ್ವಾತಂತ್ರ್ಯಪೂರ್ವದಲ್ಲಿ ಹಾಕಿದ ಅಡಿಪಾಯ ಮುಂದೆ ಹಲವಾರು ಸಾಮಾಜಿಕ ಸುಧಾರಣೆಗಳಿಗೆ ಕಾರಣವಾಯಿತು ಎಂದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಹಾಗೂ ಗೋವಿಂದದಾಸ ಕಾಲೇಜಿನ ಉಪನ್ಯಾಸಕಿ ಜಯಂತಿ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ನಾರಾಯಣಗುರುಗಳ ಸಂದೇಶದ ಕುರಿತಾಗಿ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಹೆಚ್ ಕೆ. ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಉಮೇಶ್ ಪೈ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!