ಉಡುಪಿ: ಜಾನಪದ ಕ್ಷೇತ್ರದಲ್ಲಿ ಸಂಶೋಧನೆಗಳಿಗೆ ವಿಫುಲ ಅವಕಾಶಗಳಿದ್ದು ಇದಕ್ಕೆ ಮಾರ್ಗದರ್ಶಕರ ಕೊರತೆ ಇದೆ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ದುಗ್ಗಪ್ಪ ಕಜೆಕಾರು ಹೇಳಿದರು.
ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ತುಳು ಲಿಪಿ ಕಾರ್ಯಗಾರ ನಡೆಸುವ ಬದಲಿಗೆ ಭೂತಾರಾಧನೆ ಸೇರಿದಂತೆ ಜಾನಪದ ಕ್ಷೇತ್ರದಲ್ಲಿ ಸಂಶೋಧನೆಯ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಕಾರ್ಯಗಾರಕ್ಕೆ ಒತ್ತು ನೀಡಬೇಕು. ಕನ್ನಡ ಲಿಪಿಯಲ್ಲಿ ಸಾಕಷ್ಟು ಸಾಹಿತ್ಯ ತುಳುಭಾಷೆಯಲ್ಲಿ ಬಂದಿವೆ ಎಂದರು.