Thursday, January 23, 2025
Thursday, January 23, 2025

ಅಂಬಲಪಾಡಿ- ಸಂಜೀವಿನಿ ವಿಶೇಷ ಸಂತೆ

ಅಂಬಲಪಾಡಿ- ಸಂಜೀವಿನಿ ವಿಶೇಷ ಸಂತೆ

Date:

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ‘ಮನ್ ಕೀ ಬಾತ್’ ಕಾರ್ಯಕ್ರಮದ ಆ.28ರ ನೇರ ಪ್ರಸಾರವನ್ನು ದೂರದರ್ಶನದ ಸಹಯೋಗದೊಂದಿಗೆ ಕೇಂದ್ರ ಸರಕಾರದ ಎನ್.ಆರ್.ಎಲ್.ಎಂ. ಯೋಜನೆಯ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ವೀಕ್ಷಿಸುವ ಕಾರ್ಯಕ್ರಮವು ದೇಶದ 12 ಅಧಿಕೃತ ವೀಕ್ಷಣಾ ಕೇಂದ್ರಗಳಲ್ಲಿ ಒಂದಾದ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ನಡೆದ ಸಂಜೀವಿನಿ ವಿಶೇಷ ಸಂತೆಯಲ್ಲಿ ಸ್ವಸಹಾಯ ಸಂಘಗಳ ಸದಸ್ಯರಿಂದ ಉತ್ಪಾದಿಸಲ್ಪಟ್ಟ ವಿವಿಧ ಸಾಮಗ್ರಿಗಳ ಮಾರಾಟ ಪ್ರಕ್ರಿಯೆ ನಡೆಯಿತು.

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರೋಟೀನುಯುಕ್ತ ದ್ವಿದಳ ಧಾನ್ಯಗಳ ಉತ್ಪಾದನೆ, ಪೋಷಣ್ ಅಭಿಯಾನ, ಡಿಜಿಟಲ್ ಉದ್ಯಮ, ಅಮೃತ ಸರೋವರ ತತ್ವದಡಿ ಜಲ ಮೂಲಗಳ ಅಭಿವೃದ್ಧಿಗೆ ಒತ್ತು ನೀಡುವುದು ಮುಂತಾದ ಮಹತ್ವದ ವಿಚಾರಗಳ ಬಗ್ಗೆ ಉಲ್ಲೇಖಿಸಿರುವುದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿಯವರು ಉಲ್ಲೇಖಿಸಿದ ವಿಷಯಗಳ ಬಗ್ಗೆ ವೀಕ್ಷಕರ ಅಭಿಪ್ರಾಯವನ್ನು ನೇರ ಪ್ರಸಾರದಲ್ಲಿ ಹಂಚಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿ’ಸಿಲ್ವಾ, ಅಂಬಲಪಾಡಿ ಗ್ರಾಮ ಪಂಚಾಯತ್ ಪಿ.ಡಿ.ಒ. ವಸಂತಿ, ಮನ್ ಕೀ ಬಾತ್ ವೀಕ್ಷಣೆ ಕಾರ್ಯಕ್ರಮದ ಸಂಯೋಜಕ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್, ಜಿಲ್ಲಾ ವ್ಯವಸ್ಥಾಪಕಿ ನವ್ಯಾ, ತಾಲೂಕು ವ್ಯವಸ್ಥಾಪಕ ಕೃಷ್ಣ, ತಾ.ಪಂ. ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ದೂರದರ್ಶನದ ಡಿಡಿ ನ್ಯೂಸ್ ನ್ಯಾಷನಲ್ ಮುಖ್ಯ ಪ್ರತಿನಿಧಿ ಆಯೇಷಾ ಖಾನುಮ್, ಉಡುಪಿ ಪ್ರತಿನಿಧಿ ಉದಯ್ ಪಡಿಯಾರ್, ಅಪ್ಪಾಜಿ ರಾವ್, ಅಭಿಯಂತರ ರಮೇಶ್, ತಾಲೂಕು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲತಾ ಅಶೋಕ್, ಕಾರ್ಯದರ್ಶಿ ಸುಕನ್ಯಾ ಶೆಟ್ಟಿ, ಅಂಬಲಪಾಡಿ ಎಂ.ಬಿ.ಕೆ. ಪ್ರಮೀಳಾ, ಗ್ರಾಮ ಪಂಚಾಯತ್ ಶಕುಂತಳಾ ಶೆಟ್ಟಿ, ಉಷಾ ಕಿದಿಯೂರು, ಉಷಾ ಶೆಟ್ಟಿ, ಸಬಿತಾ ಮೆಂಡನ್, ಶಶಿಧರ್ ಸುವರ್ಣ, ಸುಂದರ ಪೂಜಾರಿ, ರಾಜೇಶ್ ಸುವರ್ಣ, ಪ್ರಮೋದ್ ಸಾಲಿಯಾನ್, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಾಣಿಕ್ಯ ಒಕ್ಕೂಟ ಕಡೆಕಾರು ಇದರ ಮಹಿಳಾ ಸದಸ್ಯರು ಚಂಡೆ ವಾದನದಿಂದ ಸ್ವಾಗತಿಸಿದರು. ಅಂಬಲಪಾಡಿ, ಕಡೆಕಾರು, ಉದ್ಯಾವರ ತೆಂಕನಿಡಿಯೂರು, ಬಡಾನಿಡಿಯೂರು, ಕಲ್ಯಾಣಪುರ, ಕೆಮ್ಮಣ್ಣು, ಪೆರ್ಡೂರು ಮತ್ತಿತರ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಮನ್ ಕೀ ಬಾತ್ ವೀಕ್ಷಣೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...

ಪುಷ್ಪಾನಂದ ಫೌಂಡೇಶನ್ ವತಿಯಿಂದ ರೂ.25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ, ಜ.23: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ...

ಸಾಲಿಗ್ರಾಮ: ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠೆ ವರ್ಷಾಚರಣೆ

ಸಾಲಿಗ್ರಾಮ, ಜ.23: ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಅಯೋಧ್ಯಾಪತಿ ಶ್ರೀರಾಮ...
error: Content is protected !!