ಕುಂದಾಪುರ: ಬಿ. ಎಂ. ಸುಕುಮಾರ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ. ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್.ಆಚಾರ್ಯ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿನಿ ಗಾರ್ಗಿದೇವಿ, ಗುರುದೇವ್ ಅಕಾಡೆಮಿ ಆಫ್ ಆರ್ಟ್ಸ್ ರವರಿಂದ ಮಂಡ್ಯದಲ್ಲಿ ಆಯೋಜನೆಗೊಂಡ ರಾಷ್ಟ್ರಮಟ್ಚದ ಭರತನಾಟ್ಯ ಸ್ಪರ್ಧೆ ಗುರುದೇವೋತ್ಸವ 2022 ಇದರಲ್ಲಿ ಪ್ರಥಮ ಸ್ಥಾನದೊಂದಿಗೆ ನಾಟ್ಯ ಮಂದಾರ ಪ್ರಶಸ್ತಿ ಪಡೆದಿದ್ದಾರೆ.
ಭರತನಾಟ್ಯ ಶಿಕ್ಷಕಿ ಪ್ರವಿತಾ ಅಶೋಕ್ ಇವರಿಂದ ತರಬೇತಿ ಪಡೆದ ಗಾರ್ಗಿದೇವಿಗೆ ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್, ಸಂಸ್ಥೆಯ ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಅಭಿನಂದಿಸಿದ್ದಾರೆ.