Wednesday, January 22, 2025
Wednesday, January 22, 2025

ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಿ: ಸಚಿವ ಅಂಗಾರ

ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಿ: ಸಚಿವ ಅಂಗಾರ

Date:

ಉಡುಪಿ: ಜಿಲ್ಲೆಯಲ್ಲಿನ ಎಂಡೋಸಲ್ಫಾನ್ ಬಾಧಿತರ ಆರೋಗ್ಯ ಸುಧಾರಣೆ ಮತ್ತು ಪುರ್ನವಸತಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಎಂಡೋಸಲ್ಫಾನ್ ಸಾಮಾನ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾರ್ಚ್ 2019 ರಿಂದ ಇದುವರೆಗೆ ಹೊಸದಾಗಿ ಗುರುತಿಸಲಾಗಿರುವ 110 ಮಂದಿ ಎಂಡೋಸಲ್ಫಾನ್ ಬಾಧಿತರ ಪಟ್ಟಿಗೆ ಅನುಮೋದನೆ ನೀಡಿ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದ ಸಚಿವರು, ಎಂಡೋ ಬಾಧಿತರಿಗೆ ಉಚಿತ ಪಡಿತರ ನೀಡುವ ಕುರಿತಂತೆ ಆರೋಗ್ಯ ಇಲಾಖೆಯಿಂದ ಭಾದಿತರ ಪಟ್ಟಿ ಪಡೆದು ಅವರಿಗೆ ಅಂತ್ಯೋದಯ ಕಾರ್ಡ್‍ಗಳನ್ನು ವಿತರಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಎಂಡೋಸಲ್ಫಾನ್ ರಾಸಾಯನಿಕ ಸಿಂಪಡಣೆಯದ ಅವಧಿಯಲ್ಲಿ ಬಾಧಿತ ಪ್ರದೇಶದಲ್ಲಿ ಹುಟ್ಟಿ ಬೆಳೆದು ಅಥವಾ ವಾಸವಿದ್ದು ನಂತರದಲ್ಲಿ ಎಂಡೋಸಲ್ಫಾನ್ ಬಾಧಿತವಲ್ಲದ ಪ್ರದೇಶಗಳಿಗೆ ಬಂದು ನೆಲೆಸಿ ವಾಸವಿದು ಅಂಗವಿಕಲತೆಗೆ ಒಳಗಾದ ಅಥವಾ ಎಂಡೋಸಲ್ಫಾನ್ ಸಂಬಂಧಿತ ಯಾವುದೇ ನ್ಯೂನತೆಗಳು ಕಂಡುಬಂದ ಅಥವಾ ಅವರಿಗೆ ಜನಿಸಿದ ಮಕ್ಕಳಿಗೆ ನ್ಯೂನತೆಗಳು ಕಂಡುಬಂದಾಗ ಅವರನ್ನು ಎಂಡೋಸಲ್ಫಾನ್ ಬಾಧಿತರೆಂದು ಪರಿಗಣಿಸುವ ಕುರಿತಂತೆ ಎಸ್.ಓ.ಪಿ ಯನ್ನು ರಚಿಸಿ ಅದರನ್ವಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕೆ.ಡಿ.ಪಿ ಸಭೆಗಳಲ್ಲಿ ಈ ಬಗ್ಗೆ ಚರ್ಚಾ ವಿಷಯವನ್ನಾಗಿ ಸೇರ್ಪಡೆ ಮಾಡುವಂತೆ ತಿಳಿಸಿದರು. ಕುಂದಾಪುರದ ಸೇನಾಪುರದಲ್ಲಿ ಎಂಡೋಸಲ್ಫಾನ್ ಪೀಡಿತ ಅಂಗವಿಕಲರಿಗೆ ಶಾಶ್ವತ ಪುರ್ನವಸತಿ ಕೇಂದ್ರ ಆರಂಭ, ಜಿಲ್ಲೆಯಲ್ಲಿ ಇವರಿಗಾಗಿ ಪ್ರತ್ಯೇಕ ಡೇ ಕೇರ್ ಸೆಂಟರ್ ಆರಂಬಿಸುವ ಬಗ್ಗೆ ಚರ್ಚೆ ನಡೆಯಿತು.

ಜಿಲ್ಲೆಯಲ್ಲಿ 1980-81 ರಿಂದ 2000-01 ರ ವರೆಗೆ ಕುಂದಾಪುರದ 29, ಉಡುಪಿಯ 5 ಮತ್ತು ಕಾರ್ಕಳದ 9 ಗ್ರಾಮ ಸೇರಿದಂತೆ ಒಟ್ಟು 43 ಗ್ರಾಮಗಳಲ್ಲಿ ಎಂಡೋಸಲ್ಫಾನ್ ಸಿಂಪಡಣೆಯಾಗಿದ್ದು, ಈ ಗ್ರಾಮಗಳ ಪಕ್ಕದ 43 ಗ್ರಾಮಗಳು ಸೇರಿದಂತೆ ಒಟ್ಟು 86 ಗ್ರಾಮಗಳಲ್ಲಿ ಇದುವರೆಗೆ 28 ಸ್ಕ್ರೀನಿಂಗ್ ಶಿಬಿರ ನಡೆಸಿ ಇದುವರೆಗೆ ಒಟ್ಟು 1705 ಎಂಡೋ ಪೀಡಿತರನ್ನು ಗುರುತಿಸಲಾಗಿದ್ದು, ಇದರಲ್ಲಿ 130 ಮಂದಿ ಮೃತಪಟ್ಟಿದ್ದು, ಪ್ರಸ್ತುತ 1575 ಮಂದಿ ಎಂಡೋಸಲ್ಫಾನ್ ಪೀಡಿತರಿದ್ದು, ಇವರಿಗೆ ಮಾಸಾಶನ, ವೈದ್ಯಕೀಯ ಸೌಲಭ್ಯ, ಸಾಧನ ಸಲಕರಣೆ, ಉಚಿತ ಬಸ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ಸಭೆಯಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ. ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಜಿಲ್ಲಾಧಿದಿಕಾರಿ ಕೂರ್ಮಾರಾವ್ ಎಂ., ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್, ಕುಂದಾಪುರ ಡಿಎಫ್‍ಓ ಆಶೀಶ್ ರೆಡ್ಡಿ, ಜಿಲ್ಲಾ ಕಾನೂನು ಸೇವಾ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಮಾನವ ಹಕ್ಕು ಪ್ರತಿಷ್ಠಾನದ ಡಾ. ರವೀಂದ್ರನಾಥ್ ಶಾನುಭೋಗ್, ಅರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಅನುಷ್ಠಾನಾಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!