Monday, September 23, 2024
Monday, September 23, 2024

ಪೋಷಣ್ ಅಭಿಯಾನ, ಮಾತೃವಂದನ ಸಪ್ತಾಹ

ಪೋಷಣ್ ಅಭಿಯಾನ, ಮಾತೃವಂದನ ಸಪ್ತಾಹ

Date:

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಜಿಲ್ಲಾಮಟ್ಟದ ಪೋಷಣ್ ಮಾಸಾಚರಣೆ ಹಾಗೂ ಪ್ರಧಾನಮಂತ್ರಿ ಮಾತೃವಂದನ ಯೋಜನೆಯ ಸಪ್ತಾಹ ಕಾರ್ಯಕ್ರಮವು ನಗರದ ಜಿಲ್ಲಾ ಪಂಚಾಯತ್‌ನ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಭಾಗೀದಾರ ಇಲಾಖೆಗಳು ಪೋಷಣ್ ಮಾಸಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮಗಳನ್ನು ವೇಳಾಪಟ್ಟಿಯನ್ವಯ ಆಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಕಾರ್ಯಕ್ರಮದಲ್ಲಿ ಪೋಷಣ್ ಮಾಸಾಚರಣೆಯ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪನಿರ್ದೇಶಕಿ ವೀಣಾ ವಿವೇಕಾನಂದ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!