Home ಸುದ್ಧಿಗಳು ಪ್ರಾದೇಶಿಕ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್- ವಿದ್ಯಾರ್ಥಿವೇತನ ವಿತರಣೆ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್- ವಿದ್ಯಾರ್ಥಿವೇತನ ವಿತರಣೆ

360
0

ಕಾರ್ಕಳ: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ಜರಗಿದ 22ನೇ ವರ್ಷದ ವಾರ್ಷಿಕೋತ್ಸವ ಮತ್ತು 16ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ವೇದಿಕೆಯಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಅತ್ಯಧಿಕ ಅಂಕಗಳಿಸಿದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಕೊಟ್ಟಿಂಜೆ ದಿ. ವಾಸುದೇವ ಆಚಾರ್ಯ ಸ್ಮರಣಾರ್ಥ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.

ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆಯಲ್ಲಿ 621 ಅಂಕ ಪಡೆದು ಕನ್ನಡ ಮಾಧ್ಯಮ ವಿಭಾಗದಲ್ಲಿ ಕಾರ್ಕಳ ತಾಲೂಕಿಗೆ ಪ್ರಥಮ ಸ್ಥಾನ ತಂದು ಕೊಟ್ಟ ನಿಟ್ಟೆ ವಿದ್ಯಾಸಂಸ್ಥೆಯ ವಿದ್ಯಾರ್ಥಿ ನಿಶ್ಮಿತ್ ಬೋಳ ಹಾಗೂ 608 ಅಂಕ ಪಡೆದು ನಿಟ್ಟೆ ವಿದ್ಯಾಸಂಸ್ಥೆಗೆ ನಾಲ್ಕನೆ ಸ್ಥಾನ ತಂದು ಕೊಟ್ಟ ಸ್ನೇಹಾ ಬೋಳ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ನಂದಳಿಕೆ ಪ್ರಶಾಂತ್ ಪೂಜಾರಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪಿಡಬ್ಲ್ಯೂಡಿ ಕಂಟ್ರಾಕ್ಟರ್ ಅರುಣ್ ಕುಮಾರ್ ನಿಟ್ಟೆ, ಉದ್ಯಮಿ ಬೋಳ ಸೋಮಶೇಖರ್ ಶೆಟ್ಟಿ, ಬೆಳ್ಮಣ್ಣು ಜೇಸಿಐ ಅಧ್ಯಕ್ಷ ವೀಣೇಶ್ ಅಮೀನ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಬೋಳ ರಘುವೀರ್ ಶೆಟ್ಟಿ, ಕಾರ್ಯದರ್ಶಿ ಅಬ್ಬನಡ್ಕ ಸತೀಶ್ ಪೂಜಾರಿ, ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ನಿಕಟ ಪೂವಾಧ್ಯಕ್ಷ ಉದಯ ಅಂಚನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.