ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಸ್ವಾವಲಂಭಿಯಾಗಲು ಪೇರೇರಿಸುವ ಪ್ರೇರಣಾ ವಿಶೇಷ ಕಾರ್ಯಕ್ರಮದ ಪ್ರಯುಕ್ತ ಗುರುವಾರ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 8 ರಿಂದ 10 ನೇ ತರಗತಿಯ ಆಯ್ದ ವಿದ್ಯಾರ್ಥಿನಿಯರನ್ನು ರಜತಾದ್ರಿಯ ಜಿಲ್ಲಾ ಆಡಳಿತ ಕಚೇರಿಯ ಸಂಕೀರ್ಣದಲ್ಲಿರುವ ವಿವಿಧ ಇಲಾಖೆಗಳಿಗೆ ಭೇಟಿ ಏರ್ಪಡಿಸಲಾಯಿತು.
ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಹೆಣ್ಣು ಮಕ್ಕಳ ಸಶಕ್ತೀಕರಣಕ್ಕಾಗಿ ಮತ್ತು ಶಿಕ್ಷಣವನ್ನು ಮುಂದುವರಿಸಲು ವಿಶೇಷವಾಗಿ ಸಾರ್ವಜನಿಕ ಕ್ಷೇತ್ರಗಳಲ್ಲಿ ಉದ್ಯೋಗಗಳನ್ನು ಪಡೆಯುವಂತೆ ಪ್ರೋತ್ಸಾಹಿಸಲು, ಸರ್ಕಾರಿ ಕಚೇರಿಗಳಲ್ಲಿ ಉನ್ನತ ಮಹಿಳಾ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ, ಜಿಲ್ಲಾಮಟ್ಟದಲ್ಲಿ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಉನ್ನತ ಅಧಿಕಾರದ ಮಹತ್ವ ತಿಳಿಸುವ ಸಲುವಾಗಿ ಅಪರ ಜಿಲ್ಲಾಧಿಕಾರಿ ವೀಣಾ ಬಿ ಎನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ವಿ ಮಂಡ್ಲೂರ್, ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಜಿಲ್ಲಾ ವಿಮಾಧಿಕಾರಿ ಶೈಲಾ ಬಿ. ಎನ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಶೈಲಜಾ ದೇಶಪಾಂಡೆ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧಿಕಾರಿ ವಿದ್ಯಾ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಜಿಲ್ಲಾ ಶಿಕ್ಷಣಾಧಿಕಾರಿ ಜಾಹ್ನವಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.