Monday, January 20, 2025
Monday, January 20, 2025

ರೋಗಿಗಳಿಗೆ ಆತ್ಮವಿಶ್ವಾಸ ಮೂಡಿಸಿ: ನ್ಯಾ. ವೀರಪ್ಪ

ರೋಗಿಗಳಿಗೆ ಆತ್ಮವಿಶ್ವಾಸ ಮೂಡಿಸಿ: ನ್ಯಾ. ವೀರಪ್ಪ

Date:

ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರಿಗೆ ವೈದ್ಯರು ಮತ್ತು ಶುಶ್ರೂಷ ಸಿಬ್ಬಂದಿ ಆತ್ಮವಿಶ್ವಾಸ ಮೂಡಿಸುವುದರ ಮೂಲಕ ಅವರು ಶೀಘ್ರದಲ್ಲಿ ಚೇತರಿಸಿಕೊಳ್ಳುವಂತೆ ಪ್ರೇರೆಪಿಸಬೇಕು ಎಂದು ಕರ್ನಾಟಕ ಹೈಕೋರ್ಟ್‍ನ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ.ವೀರಪ್ಪ ಹೇಳಿದರು.

ಅವರು ಇಂದು ಉಡುಪಿ ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಆಸ್ಪತ್ರೆಯಲ್ಲಿ ರೋಗಿಗಳನ್ನು ವಿಚಾರಿಸಿ, ಆಸ್ಪತ್ರೆಯ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರಿಗೆ ಉತ್ತಮ ಚಿಕಿತ್ಸೆ ನೀಡುವುದು ಮಾತ್ರವಲ್ಲದೇ, ವಾರದಲ್ಲಿ ಒಂದು ದಿನ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ಸಿಬ್ಬಂದಿಗಳು ಅವರಿಗೆ ಆತ್ಮವಿಶ್ವಾಸ ಮೂಡಿಸುವುದರ ಮೂಲಕ ಅವರು ಶೀಘ್ರದಲ್ಲಿ ಗುಣಮುಖರಾಗಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಸಾಹದಿಂದ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು.

ಪುರುಷರ ವಾರ್ಡ್‍ನಲ್ಲಿ ಅಪಘಾತದಿಂದ ಶಸ್ತ್ರಚಿಕಿತ್ಸೆಗೆ ಒಳಗಾದವನ್ನು ವಿಚಾರಿಸಿದ ಅವರು ವಾಹನ ಚಾಲನೆ ಸಂದರ್ಭದಲ್ಲಿ ಮದ್ಯಪಾನ ಮಾಡುವುದು, ಅತಿವೇಗದಿಂದ ವಾಹನ ಚಲಾವಣೆ ಮತ್ತು ಹೆಲ್ಮೆಟ್ ಧರಿಸದೇ ಅಪಘಾತಗಳಿಗೆ ಒಳಗಾಗಿ ದಾಖಲಾಗುತ್ತಿರುವುದನ್ನು ತಿಳಿದು, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಂಚಾರ ನಿಯಮಗಳ ಅನುಷ್ಠಾನ ಕುರಿತು ಇನ್ನಷ್ಟು ಪರಿಣಾಮಕಾರಿಯಾಗಿ ಪರೀಕ್ಷಿಸುವಂತೆ ಸೂಚಿಸಿದರು.

ಉಡುಪಿ ಜಿಲ್ಲಾಸ್ಪತ್ರೆಯ ನಿರ್ವಹಣೆ ಉತ್ತಮವಾಗಿದೆ, ಸಾರ್ವಜನಿಕರು ಇಲ್ಲಿನ ಸೌಲಭ್ಯಗಳ ಪ್ರಯೋಜನ ಪಡೆಯಬೇಕು. ಜಿಲ್ಲೆಯಲ್ಲಿ ನಿರಾಶ್ರಿತರಿಗೆ ಉತ್ತಮ ಕೇಂದ್ರ ಸ್ಥಾಪನೆಯ ಅಗತ್ಯವಿದ್ದು ಈ ಬಗ್ಗೆ ಸರಕಾರಕ್ಕೆ ವರದಿ ನೀಡುತ್ತೇವೆ ಎಂದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಮತ್ತು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!