ಕುಂದಾಪುರ: ಆದರ್ಶ ಆಸ್ಪತ್ರೆ ಉಡುಪಿ, ಗ್ರಾಮ ಪಂಚಾಯತ್ ಕೊರ್ಗಿ, ಶಾಲಾಭಿವೃದ್ದಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕೂತ್ತೂರು, ಹಳೆ ವಿದ್ಯಾರ್ಥಿ ಸಂಘ ಹೆಸ್ಕೂತ್ತೂರು, ಸಂಜೀವಿನಿ ಒಕ್ಕೂಟ ಕೊರ್ಗಿ, ನಮ್ಮ ಪರಸ್ಪರ ಆಸರೆ ಸೊಸೈಟಿ ನಮ್ಮ ಭೂಮಿ ಸಿ.ಡಬ್ಲ್ಯೂ. ಸಿ. ಸಂಸ್ಥೆ ಕನ್ಯಾನ ಕುಂದಾಪುರ ಜಂಟಿ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕೂತ್ತೂರು ಇಲ್ಲಿ ನಡೆಯಿತು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಉಚಿತ ಆರೋಗ್ಯ ತಪಾಸಣಾ ಶಿಬಿರ ವೀಕ್ಷಣೆ ಮಾಡಿ ಆರೋಗ್ಯ ತಪಾಸಣೆ ಮಾಡಿಕೊಂಡರು. ಎಲ್ಲರೂ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ವೈದ್ಯರೆ ಮನೆ ಬಾಗಿಲಿಗೆ ಬಂದಿರುವುದು ಸಂತೋಷ ಎಂದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಹಾಗೂ ಆದರ್ಶ ಆಸ್ಪತ್ರೆ ಉಡುಪಿ ವೈದ್ಯಕೀಯ ತಜ್ಞ ಡಾ. ಸುದೀಪ್ ಶೆಟ್ಟಿ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು.
ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಮಾನಸಿಕ ನೆಮ್ಮದಿಯಿಂದ ಆರೋಗ್ಯವೆ ಶ್ರೀಮಂತಿಕೆಯಿಂದ ಕೂಡಿರಬೇಕು ಎಂದು ಚಂದ್ರಶೇಖರ ಶೆಟ್ಟಿ ಹೇಳಿದರು. ಅನಾರೋಗ್ಯಕ್ಕೆ ಒಳಗಾಗುವ ಮೊದಲೇ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಜೀವನ ಶೈಲಿಯಲ್ಲಿ ಪೌಷ್ಟಿಕಾಂಶ ಆಹಾರ ಸೇವನೆ ಜೊತೆಗೆ ದೈಹಿಕ ಚಟುವಟಿಕೆಯ ಕೆಲಸಗಳನ್ನು ಮಾಡಬೇಕು. ಲಸಿಕೆಯ ಲಾಭಗಳನ್ನು ಪಡೆದುಕೊಳ್ಳಬೇಕು. ಪ್ರತಿಯೊಬ್ಬರೂ ಆರೋಗ್ಯ ವಿಮೆ ಮಾಡಿಕೊಳ್ಳಬೇಕು ಎಂದು ಡಾ. ಸುದೀಪ್ ಶೆಟ್ಟಿ ಹೇಳಿದರು.
ಕೊರ್ಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೌರೀಶ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಾತಾವರಣದ ಪರಿಸ್ಥಿತಿಗನುಗುಣಾವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಉತ್ತಮ ಆರೋಗ್ಯ ಹೊಂದಿರುವುದೇ ಭಾಗ್ಯ ಎಂದರು.
ನಮ್ಮ ಭೂಮಿ ಸಿ.ಡಬ್ಲ್ಯೂ. ಸಿ ಸಂಸ್ಥೆಯ ಗಣೇಶ ಶೆಟ್ಟಿ, ಹೆಸ್ಕೂತ್ತೂರು ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಅಬ್ದುಲ್ ರೋಪ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಶೇಖರ ಕುಮಾರ್ ಹಾಗೂ ಶಿಕ್ಷಕ ವೃಂದ, ಕೊರ್ಗಿ ಪಂಚಾಯತ್ ಪಿ.ಡಿ.ಒ ಸುಧಾಕರ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗ ಮತ್ತು ಸರ್ವ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಉಡುಪಿ ಆದರ್ಶ ಆಸ್ಪತ್ರೆಯ ಡಾ. ದಮಯಂತಿ, ಡಾ. ಅಭಿಜಿತ್ ಕುಮಾರ್ ಉಪಸ್ಥಿತರಿದ್ದರು. ಮಕ್ಕಳ ಮಿತ್ರ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.