Tuesday, November 26, 2024
Tuesday, November 26, 2024

ಕಲ್ಯಾಣಪುರ- ಕ್ಷಯ ಮುಕ್ತ ಗ್ರಾಮ ಅಭಿಯಾನ

ಕಲ್ಯಾಣಪುರ- ಕ್ಷಯ ಮುಕ್ತ ಗ್ರಾಮ ಅಭಿಯಾನ

Date:

ಕಲ್ಯಾಣಪುರ: ಗ್ರಾಮ ಪಂಚಾಯತ್ ಕಲ್ಯಾಣಪುರ, ಕ್ಷಯ ರೋಗ ನಿರ್ಮೂಲನ ಕೇಂದ್ರ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ಮಣ್ಣು, ಕಲ್ಯಾಣಪುರ ಮತ್ತು ನಿಡಂಬಳ್ಳಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ಗ್ರಾಮ ಅಭಿಯಾನ ಕಲ್ಯಾಣಪುರದ ನೇಜಾರು ಕ್ರೀಡಾಂಗದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ ದೀಪ ಬೆಳಗಿಸಿ ಉದ್ಘಾಟಿಸಿದರು. ಕಲ್ಯಾಣಪುರ ಗ್ರಾಮವನ್ನು ಕ್ಷಯ ಮುಕ್ತ ಗ್ರಾಮವನ್ನಾಗಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ಮಣ್ಣು ವೈದ್ಯಾಧಿಕಾರಿಗಳಾದ ಡಾ. ಪ್ರೀಮಾ ಲವೀನಾ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿಗಳಾದ ದೇವಪ್ಪ ಪಟಗಾರ್ ಮಾತನಾಡಿ, ಕ್ಷಯ ರೋಗ ನಿರ್ಮೂಲನೆಯಲ್ಲಿ ಯಾವ ರೀತಿಯಾಗಿ ಸಾಗಿದರೆ ಒಳಿತು ಎನ್ನುವುದನ್ನು ತಿಳಿಸಿದರು.

ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಘಟಕದ ತಾಲೂಕು ಮೇಲ್ವಿಚಾರಕರಾದ ಪ್ರಶಾಂತ್ ಶೆಟ್ಟಿ ಪರಪ್ಪಾಡಿ ಕಾರ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಧನ್ವಂತರಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಕ್ಷಯ ರೋಗ ಸಮೀಕ್ಷೆಯಲ್ಲಿ ಪಾಲ್ಗೊಂಡರು. ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಸ್ಥಳೀಯರು, ಅರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ಸಮುದಾಯ ಆರೋಗ್ಯ ಅಧಿಕಾರಿ ದೀಪ್ತಿ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು, ಸಮುದಾಯ ಆರೋಗ್ಯ ಅಧಿಕಾರಿ ಸರಸ್ವತಿ ಸ್ವಾಗತಿಸಿ, ಆಶಾ ಕಾರ್ಯಕರ್ತೆ ಸುರೇಖಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!