ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಸೈಬರ್ ಸೆಕ್ಯುರಿಟಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಎಂ.ಎಸ್. ಪದವಿಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಸಂತೋಷ್ ನೀಲಾವರ ಇವರು ಸೈಬರ್ ಸೆಕ್ಯುರಿಟಿ ಮತ್ತು ಸೈಬರ್ ಅಪರಾಧಗಳ ವಿಷಯಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ರೈ ಕೆ. ವಹಿಸಿದ್ದು, ವಿದ್ಯಾರ್ಥಿಗಳಿಗೆ ಕಾರ್ಯಾಗಾರದ ವಿಷಯಗಳನ್ನು ಅರ್ಥಮಾಡಿಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವೇದಿಕೆಯಲ್ಲಿ ಸಮಾಜಕಾರ್ಯ ವಿಭಾಗದ ಸಂಚಾಲಕರಾದ ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಷ್ಮಾ ಟಿ. ಉಪಸ್ಥಿತರಿದ್ದರು.
ದ್ವಿತೀಯ ಎಂ.ಎಸ್.ಡಬ್ಲ್ಯೂ ವಿಭಾಗದ ವಿದ್ಯಾರ್ಥಿಗಳಾದ ರತನ್ ಸ್ವಾಗತಿಸಿ, ದೀಪಾ ವಂದಿಸಿದರು. ಸಂಧ್ಯಾ ಕೆ.ಎಸ್. ನಿರೂಪಿಸಿದರು.