Monday, January 20, 2025
Monday, January 20, 2025

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು: ಆನಂದ ಸಿ ಕುಂದರ್

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು: ಆನಂದ ಸಿ ಕುಂದರ್

Date:

ಗಂಗೊಳ್ಳಿ: ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ 2021-22ರ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಬೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ನಡೆಯಿತು.

ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಭೆಗಳನ್ನು ಪೋಷಿಸಿ ಪುರಸ್ಕರಿಸುವಂತಹ ಇಂತಹ ಸಮಾರಂಭಗಳು ಉಳಿದ ವಿದ್ಯಾರ್ಥಿಗಳಿಗೆ ಮತ್ತಷ್ಟು ಹೆಚ್ಚಿನ ಸಾಧನೆಗಳನ್ನು ಮಾಡಲು ಪ್ರೇರಣೆ ನೀಡುತ್ತವೆ.

ವಿದ್ಯಾರ್ಥಿಗಳು ಭವಿಷ್ಯದಲ್ಲಿ ತಾವು ಕೂಡ ಇಂತಹ ಕೊಡುಗೆಗಳನ್ನು ನೀಡುವಲ್ಲಿ ಉತ್ಸಾಹವನ್ನು ತೋರಬೇಕಿದೆ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಡಾ. ಉಮೇಶ್ ಪುತ್ರನ್ ತಮ್ಮ ವತಿಯಿಂದ ಸರಸ್ವತಿ ವಿದ್ಯಾಲಯದ ವಿಜ್ಞಾನದ ಪಿಸಿಎಮ್‌ಬಿ ಮತ್ತು ಪಿಸಿಎಮ್‌ಸಿ ವಿಭಾಗಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದ ಶಶಾಂಕ್ ಯು ಶೆಣೈ ಮತ್ತು ಉಸ್ವಾ ಇವರಿಗೆ ತಲಾ ೨೫,೦೦೦ ರೂಪಾಯಿಗಳ ನಗದು ಬಹುಮಾನವನ್ನು ವಿತರಿಸಿದರು. ಸುಮಾ ಉಮೇಶ್ ಪುತ್ರನ್ ಉಪಸ್ಥಿತರಿದ್ದರು.

ಸರಸ್ವತಿ ವಿದ್ಯಾಲಯದಲ್ಲಿ ಹೊಸದಾಗಿ ನಿರ್ಮಿಸಲಾದ ಕಿಂಡರ್ ಪ್ಲೇ ಗಾರ್ಟನ್‌ನ್ನು ಉದ್ಘಾಟಿಸಿ ಪ್ರತಿಭಾ ಪುರಸ್ಕಾರವನ್ನು ವಿತರಿಸಿದ ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಉದ್ಯಮಿ ಆನಂದ ಸಿ ಕುಂದರ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು.

ಬಹುಮುಖಿ ಕೌಶಲ್ಯವನ್ನು ಬೆಳೆಸಿಕೊಳ್ಳುವಲ್ಲಿ ಪ್ರಯತ್ನಶೀಲರಾಗಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಆನಂದ ಸಿ ಕುಂದರ್ ಕಿಂಡರ್ ಪ್ಲೇ ಗಾರ್ಟನ್ ನಿರ್ಮಾಣದ ಪ್ರಯುಕ್ತ ನಗದು ಸಹಾಯ ರೂಪದಲ್ಲಿ ಐದು ಲಕ್ಷ ರೂಪಾಯಿಗಳನ್ನು ಜಿ.ಎಸ್.ವಿ.ಎಸ್ ಅಸೋಷಿಯೇಷನ್‌ಗೆ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಆನಂದ್ ಸಿ ಕುಂದರ್ ಅವರನ್ನು ಸನ್ಮಾನಿಸಲಾಯಿತು.

ರಾಜ್ಯಮಟ್ಟದಲ್ಲಿ ವಾಣಿಜ್ಯ ವಿಭಾಗದಲ್ಲಿ ಎಂಟನೇ ಸ್ಥಾನ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ ರಕ್ಷಿತಾ ಆರ್ ಪೂಜಾರಿ, ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಶಶಾಂಕ್ ಯು ಶೆಣೈ, ಎಸ್ ಎಸ್ ಎಲ್ ಸಿಯಲ್ಲಿ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಪ್ರಥಮ ಸ್ಥಾನಿ ನಿಶಾ ಬಿ ಪೂಜಾರಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ರಾಜ್ಯಮಟ್ಟದಲ್ಲಿ ಮೂರನೇ ರ‍್ಯಾಂಕ್ ಗಳಿಸಿದ ನೇಹಾ ಎಸ್ ಕೊಡೇರಿ, ಏಳನೇ ರ‍್ಯಾಂಕ್ ಗಳಿಸಿದ ಪೂರ್ವಿ ಆರ್ ಚಿತ್ತಾಲ್ ಮತ್ತು ಒಂಬತ್ತನೇ ರ‍್ಯಾಂಕ್ ಗಳಿಸಿದ ಅಮೋಘ್ ಎ ದೇವಾಡಿಗ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

ವಾಣಿಜ್ಯ ವಿಭಾಗದ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದ ರಕ್ಷಿತಾ ಆರ್ ಪೂಜಾರಿ, ಜಾಹ್ನವಿ ಮತ್ತು ನಿತ್ಯಾನಂದ ಇವರಿಗೆ ನಗರ ಕೃಷ್ಣಾನಂದ ನಾಯಕ್ ಸಿ.ಎ ಬೆಂಗಳೂರು ಕೊಡಮಾಡಿದ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನವನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆದರ್ಶ ಆಸ್ಪತ್ರೆ ಇವರ ಸಹಯೋಗದಲ್ಲಿ ಕೊಡಮಾಡಿದ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಕೆ. ನಾರಾಯಣ ಶೆಟ್ಟಿ ಇವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.

ಬೆಂಗಳೂರು ಪೈ ಗ್ರೂಪ್ ಆಫ್ ಹೋಟೆಲ್ ಚೇರ‍್ಮನ್ ಎಮ್ ಜಗನ್ನಾಥ ಪೈ ಕೊಡಮಾಡಿದ ತಲಾ ಹತ್ತು ಸಾವಿರ ರೂಪಾಯಿ ನಗದನ್ನು ಇವರಿಗೆ ನೀಡಲಾಯಿತು.

ಜಿ.ಎಸ್.ವಿ.ಎಸ್ ಅಸೋಷಿಯೇಷನ್‌ನ ಅಧ್ಯಕ್ಷ ಡಾ. ಕಾಶೀನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಶುಭ ಹಾರೈಸಿದರು. ಶಿಕ್ಷಕಿ ಶ್ರೀಲತಾ ಮತ್ತು ಸುಜಾತ ದೇವಾಡಿಗ ಪರಸ್ಕಾರ ಪಡೆದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.

ನೇಹಾ ಮತ್ತು ಪೂರ್ವಿ ಪ್ರಾರ್ಥಿಸಿದರು. ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಉಪಸ್ಥಿತರಿದ್ದರು. ಜಿ.ಎಸ್.ವಿ.ಎಸ್ ಅಸೋಷಿಯೇಷನ್‌ನ ಕಾರ‍್ಯದರ್ಶಿ ಹೆಚ್ ಗಣೇಶ್ ಕಾಮತ್ ಪ್ರಸ್ತಾವಿಕ ಮಾತುಗಳನ್ನಾಡಿದರು.

ಜಿ.ಎಸ್.ವಿ.ಎಸ್ ಅಸೋಷಿಯೇಷನ್‌ನ ಸದಸ್ಯ ರಾಮನಾಥ ನಾಯಕ್ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಧ್ಯಾಯ ರಾಘವೇಂದ್ರ ಶೇರುಗಾರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!