Sunday, January 19, 2025
Sunday, January 19, 2025

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಾರಂಭಿಸಿ: ಜಿಲ್ಲಾಧಿಕಾರಿ

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಾರಂಭಿಸಿ: ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುದಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಬೆಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನಸಾಮಾನ್ಯರು ರಸ್ತೆಯಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿದಾಗ ಅಪಘಾತದಿಂದ ದೂರವಿರಲು ಸಾಧ್ಯ, ನಿಯಮಗಳನ್ನು ಪಾಲಿಸಿದದ್ದಲ್ಲಿ ಸುರಕ್ಷಿತವಾಗಿ ಸಂಚರಿಸಲು ಅಸಾಧ್ಯವಾಗುತ್ತದೆ ಇದನ್ನು ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದರು.

ಜಿಲ್ಲೆಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಅಪಘಾತ ವಲಯ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ರಾ.ಹೆದ್ದಾರಿ, ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತತ್ ಕ್ಷಣದಲ್ಲಿಯೇ ತಾತ್ಕಾಲಿಕ ಸುರಕ್ಷತಾ ಸೌಕರ್ಯಗಳ ಕಾರ್ಯಗಳನ್ನು ಕೈಗೊಳ್ಳುವುದರಿಂದ ಮರಣ ಹೊಂದುವಂತಹ ಅಪಘಾತಗಳನ್ನು ತಪ್ಪಿಸಲು ಸಾಧ್ಯ ಇದಕ್ಕೆ ಹೆಚ್ಚಿನ ಒತ್ತು ನೀಡಬೇಕು,

ಮುಂದಿನ ದಿನಗಳಲ್ಲಿ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಬೇಕು ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರಕ್ಕೆ ಅನುಸರಣಾ ವರದಿಯನ್ನು ಒಂದು ವಾರದೊಳಗೆ ನೀಡಬೇಕೆಂದು ಸೂಚನೆ ನೀಡಿದರು.

ಇಂದ್ರಾಳಿ ರೈಲ್ವೆ ಮೇಲು ಸೇತುವೆ ಮೇಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಅಕ್ಟೋಬರ್ 1 ರಿದ ಪ್ರಾರಂಭಿಸಿ 1 ತಿಂಗಳ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಒಂದು ಬದಿಯ ರಸ್ತೆಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರ್ಯವನ್ನು ರಾ. ಹೆದ್ದಾರಿ ಅಧಿಕಾರಿಗಳು ಕೈಗೊಳ್ಳಬೇಕು. ಈ ಕಾಮಗಾರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಪೊಲೀಸ್ ಇಲಾಖೆ, ನಗರಸಭೆ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ನೀಡಬೇಕು ಎಂದು ಸೂಚನೆ ನೀಡಿದರು.

ನಗರ ವ್ಯಾಪ್ತಿಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಸೂಚನಾ ಫಲಕಗಳನ್ನು ಅಗತ್ಯವಿರುವ ಅಳವಡಿಸಬೇಕು ಹಾಗೂ ಹಂಪ್ಸ್, ಕ್ಯಾಟ್ ಐ, ಪಾದಚಾರಿ ಮಾರ್ಗದ ಲೈನ್ ಗಳು ಸೇರಿದಂತೆ ಮತ್ತಿತರ ಸೂಚನೆಗಳನ್ನು ತಪ್ಪದೇ ಅಳವಡಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚೀಂದ್ರ ಮಾತನಾಡಿ, ರಾ. ಹೆದ್ದಾರಿಯಲ್ಲಿ ಈ ಹಿಂದೆಯೇ ಅಪಘಾತ ವಲಯ ಸ್ಥಳಗಳನ್ನು ಗುರುತಿಸಿ, ಅಗತ್ಯವಿರುವ ವೈಜ್ಞಾನಿಕ ಕಾರ್ಯಗಳನ್ನು ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಗಳು ಆಗದೇ ಇರುವ ಬಗ್ಗೆ ಸಮಿತಿಯ ಗಮನಕ್ಕೆ ತಂದ ಅವರು ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಅಂತಹ ಸ್ಥಳದಲ್ಲಿ ಅಪಘಾತಗಳು ನಡೆದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಹ ಪ್ರಕರಣಗಳಲ್ಲಿ ಸಹ ಅಪರಾಧಿಗಳನ್ನಾಗಿಸುವುದಾಗಿ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ರಸ್ತೆ ನಿಯಮಗಳ ಉಲ್ಲಂಘನೆಯ 42944 ಪ್ರಕರಣಗಳಲ್ಲಿ 1.96 ಕೋಟಿ ಗೂ ಹೆಚ್ಚೂ ದಂಡವನ್ನು ಸಂಗ್ರಹಸಲಾಗಿದೆ ಎಂದ ಅವರು ವಾಹನ ಸವಾರರು ಸೀಲ್ ಬೆಲ್ಟ್, ಹೆಲ್ಮೆಟ್ ಸೇರಿದಂತೆ ಮತ್ತಿತರ ಸುರಕ್ಷತಾ ಸಾಧನಗಳನ್ನು ತಪ್ಪದೇ ಬಳಕೆ ಮಾಡಿಕೊಳ್ಳಬೇಕು ಇದರಿಂದ ಸುರಕ್ಷಿತವಾಗಿರಲು ಸಾಧ್ಯ ಎಂದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ರಾ.ಹೆದ್ದಾರಿ ಅಭಿಯಂತರ ನಾಗರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!