Sunday, January 19, 2025
Sunday, January 19, 2025

ಸೆ. 17- ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನ

ಸೆ. 17- ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನ

Date:

ಉಡುಪಿ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸಮುದ್ರ ತೀರವನ್ನು ಸ್ವಚ್ಚಗೊಳಿಸುವುದರೊಂದಿಗೆ ಜನರಲ್ಲಿ ಸ್ಚಚ್ಛ ಹಾಗೂ ಸುರಕ್ಷಿತ ಸಾಗರದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸಾಗರ ಜೀವ ಸಂಪನ್ಮೂಲ ಮತ್ತು ಪರಿಸರ ವಿಜ್ಞಾನ ಕೇಂದ್ರ ಸಂಸ್ದೆಯು ಸ್ವಚ್ಚ ಸಾಗರ ಸುರಕ್ಷಿತ ಸಾಗರ ಎಂಬ ವಿನೂತನ ಶೈಲಿಯ 75 ದಿನಗಳ ಸುದೀರ್ಘ ಕಾರ್ಯಕ್ರಮಕ್ಕೆ ಈಗಾಗಲೇ ಜುಲೈ 3 ರಂದು ಚಾಲನೆ ನೀಡಲಾಗಿದ್ದು, ಸೆಪ್ಟಂಬರ್ 17 ರ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನದಂದು ಮುಕ್ತಾಯಗೊಳ್ಳಲಿದೆ.

ಸೆ. 17 ರಂದು ಬೆಳಗ್ಗೆ 7.30 ಕ್ಕೆ ಮಲ್ಪೆ ಬೀಚ್‌ನಲ್ಲಿ ನಡೆಯಲಿರುವ ಸ್ಚಚ್ಛ ಸಾಗರ, ಸುರಕ್ಷಿತ ಸಾಗರ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹಾಗೂ ಮತ್ತಿತರರು ಉಪಸ್ಥಿತರಿರಲಿದ್ದಾರೆ.

ನಗರಸಭೆ ಆಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಲಿದ್ದು, ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಭಾರತೀಯ ತಟ ರಕ್ಷಣಾ ಪಡೆ, ಕರಾವಳಿ ಕಾವಲು ಪೊಲೀಸ್ ಇಲಾಖೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಎನ್.ಎಸ್. ಅಪದ ಮಿತ್ರದ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.

ಅಭಿಯಾನದಲ್ಲಿ ಶಾಲಾ-ಕಾಲೇಜು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲಿ, ಸಮುದ್ರ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರಲ್ಲಿ, ಮೀನುಗಾರ ಸಮುದಾಯಗಳಲ್ಲಿ ಹಾಗೂ ಕರಾವಳಿ ತೀರಗಳಲ್ಲಿ ವ್ಯವಹರಿಸುವ ಮತ್ತು ಸಾರ್ವಜನಿಕರಲ್ಲಿ, ಸಮುದ್ರ ತೀರಗಳಲ್ಲಿ ಎಸೆಯಲ್ಪಡುವ ತ್ಯಾಜ್ಯಗಳಿಂದಾಗಿ ಸಮುದ್ರ ಪರಿಸರ ವ್ಯವಸ್ಧೆಯ ಮೇಲೆ ಉಂಟಾಗುವ ಅಡ್ಡ ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲಾಗುವುದು.

ಸ್ಚಚ್ಛ ಸಾಗರ, ಸುರಕ್ಷಿತ ಸಾಗರ ಅಭಿಯಾನವು ದೇಶದ 7,500 ಕಿ.ಮೀ. ವ್ಯಾಪ್ತಿಯ, 75 ಕರಾವಳಿ ಜಿಲ್ಲೆಗಳ, 75 ಪ್ರಮುಖ ಸಮುದ್ರ ತೀರಗಳಲ್ಲಿ, 75 ಸ್ವಯಂ ಸೇವಕರಿಂದ ಕರಾವಳಿ ತೀರದ ಪ್ರತೀ ಕಿ.ಮೀ. ಒಳಗೊಳ್ಳುವ ನಿಟ್ಟಿನಲ್ಲಿ ಕಾರ್ಯಾಚರಿಸಲಿದ್ದು, ಸದ್ರಿ ಸ್ವಯಂ ಸೇವಕರು ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ಗುರಿಯಾಗಿಸಿ, ಪ್ರತೀ ಮನೆಗಳಲ್ಲಿಯೂ ಇಂತಹ ತ್ಯಾಜ್ಯಗಳನ್ನು ಮೂಲದಿಂದಲೇ ಬೇರ್ಪಡಿಸುವ ಕಾರ್ಯವನ್ನು ನಡೆಸಲಿದ್ದಾರೆ.

ಅಭಿಯಾನದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು ಇಕೋಮಿತ್ರ ಆಪ್‌ನಲ್ಲಿ https://ecomitram.page.link/HNN8PWVSbH7kdZpB6 ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!