ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಶಿಕ್ಷಕರಿಗಾಗಿ ಆಯೋಜಿಸಲ್ಪಟ್ಟ ಪ್ರೇರಣಾ – 2022 ಸರಣಿ ಕಾರ್ಯಾಗಾರದ ಭಾಗವಾಗಿ ಲಿಮಿಟ್ ಲೆಸ್ ಸೈನ್ಸ್ ಎನ್ನುವ ವಿಷಯವಾಗಿ ಶಿಕ್ಷಕ ಪುನಶ್ಚೇತನ ಕಾರ್ಯಾಗಾರ ಜರುಗಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಹೈಸ್ಕೂಲ್ ನ ನಿವೃತ್ತ ವಿಜ್ಞಾನ ಶಿಕ್ಷಕರು 2006ರಲ್ಲಿ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ ಬಾಲಗಂಗಾಧರ್ ಶೆಟ್ಟಿಯವರು ಲಿಮಿಟ್ ಲೆಸ್ ಸೈನ್ಸ್ ಎನ್ನುವ ವಿಷಯವಾಗಿ ಶಿಕ್ಷಕರಿಗೆ ವೈಜ್ಞಾನಿಕ ಪ್ರಯೋಗ ಹಾಗೂ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿಯನ್ನು ನೀಡಿದರು.
ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಉಪಪ್ರಾಂಶುಪಾಲೆ ಶುಭ ಕೆ.ಎನ್, ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಕಿಂಡರ್ ಗಾರ್ಟನ್ ನ ಮುಖ್ಯ ಶಿಕ್ಷಕಿ ಲತಾ ಜಿ ಭಟ್, ಬೋಧಕರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ ಸ್ವಾಗತಿಸಿ, ಶಿಕ್ಷಕ ರವಿಚಂದ್ರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.