ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ ಇಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹೊಸ ಶಿಕ್ಷಣ ನೀತಿ 2020 ರ ಕುರಿತು ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.
ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೊಟೇಶ್ವರ- ಕುಂದಾಪುರದ ವಾಣಿಜ್ಯಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ವೆಂಕಟರಾಮ್ ಭಟ್ ವಿದ್ಯಾರ್ಥಿಗಳನ್ನುದ್ದೇಶಿಸಿ ಹೊಸ ಶಿಕ್ಷಣ ನೀತಿಯ ಮಹತ್ವದ ಬಗ್ಗೆ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ದಿನಚರಿಯಲ್ಲಿ ಉತ್ತಮ ಅಂಶಗಳನ್ನು ಅಳವಡಿಸಿಕೊಂಡಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ್ ವಿ ಗಾಂವಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಸುಬ್ರಮಣ್ಯಎ ಮತ್ತು ವಿದ್ಯಾರ್ಥಿ ಕ್ಷೇಮಪಾನಾಧಿಕಾರಿಗಳಾದ ಡಾ. ಸುನೀತಾ ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ರಾಜಣ್ಣ ಎಂ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಸುಬ್ರಮಣ್ಯ ಎ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.