ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಾಧ್ಯಮ ಹಾಗೂ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಅಮೃತ್ ಶೆಣೈ ಅವರನ್ನು ನೇಮಕ ಮಾಡಲಾಗಿದೆ.
ಅವರು ಈ ಹಿಂದೆ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ, ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ, ಮಂಗಳೂರು ವಿ ವಿ ಶೈಕ್ಷಣಿಕ ಸಮಿತಿ ಸದಸ್ಯ, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸದಸ್ಯ, ಸಹಬಾಳ್ವೆ ಉಡುಪಿ, ಸೌತ್ ಶಾಲಾ ಹಳೆ ವಿದ್ಯಾರ್ಥಿ ಸಂಘ ಹೀಗೆ ಅನೇಕ ಸಾಮಾಜಿಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ನ ಸದಸ್ಯ ಆಗಿ ಉಡುಪಿ ಜಿಲ್ಲಾ ಕೋ ಆರ್ಡಿನಟರ್, ಸಂಚಾಲಕ ಆಗಿ ಸೇವೆ ಸಲ್ಲಿಸಿರುವ ಅವರು ನೂತನ ಜವಾಬ್ದಾರಿ ನೀಡಿದಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಪ್ರಿಯಾಂಕ ಖರ್ಗೆಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.