ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ, ರಾಜ್ಯ ಸರಕಾರದ ಅಧಿಸೂಚನೆಯಂತೆ ಯಾವುದೇ ವ್ಯಕ್ತಿ, ಅಂಗಡಿ ಮಾಲೀಕ, ಮಾರಾಟಗಾರ, ಸಗಟು ಮಾರಾಟಗಾರ ಅಥವಾ ಚಿಲ್ಲರೆ ವ್ಯಾಪಾರಿ, ವ್ಯಾಪಾರಿ ಮತ್ತು ಮಾರಾಟಗಾರರು, ಪ್ಲಾಸ್ಟಿಕ್ ಚೀಲ, ನಾನ್-ಓವೆನ್ ಚೀಲ, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೂಲ್ ಮತ್ತು ಪ್ಲಾಸ್ಟಿಕ್ ಮೈಕೋ ಬೀಡ್ಸ್ನಿಂದ ತಯಾರಾದಂತಹ ವಸ್ತುಗಳ ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ನಿಷೇಧಿಸಲಾಗಿದ್ದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ ಕಂಡುಬಂದಲ್ಲಿ ದಂಡ ವಿಧಿಸಿ, ನಿಷೇದಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುಟ್‌ಪಾತ್ ಅತಿಕ್ರಮಣ ತೆರವುಗೊಳಿಸುವ ಕುರಿತು: ಉಡುಪಿ ನಗರಸಭಾ ವ್ಯಾಪ್ತಿಯ ಸೂಚಿತ ಪ್ರದೇಶವನ್ನು ಹೊರತುಪಡಿಸಿ, ರಸ್ತೆ ಬದಿ ಹಾಗೂ ಪುಟ್‌ಪಾತ್‌ಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯನ್ನುಂಟು ಮಾಡಿ ಹೂವು, ಹಣ್ಣು, ತಿಂಡಿ ತಿನಿಸು ಹಾಗೂ ಇತರ ವಸ್ತುಗಳ ಮಾರಾಟ ಮಾಡುವ, ಅಂಗಡಿಗಳ ಮುಂಭಾಗ ಹೆಚ್ಚುವರಿ ಶೀಟ್ ಅಳವಡಿಸಿ ಸಾಮಾಗ್ರಿ ಇಟ್ಟಿರುವುದು ಹಾಗೂ ಕಟ್ಟಡಗಳ ಪಾರ್ಕಿಂಗ್ ಸ್ಥಳ ಅತಿಕ್ರಮಣವನ್ನು ತೆರವುಗೊಳಿಸದಿದ್ದಲ್ಲಿ, ದಂಡ ವಿಧಿಸಿ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.