Wednesday, January 22, 2025
Wednesday, January 22, 2025

ಹಿರಿಯ ನಾಗರಿಕರ ಅನುಭವಗಳು ಸಮಾಜಕ್ಕೆ ಅಗತ್ಯ

ಹಿರಿಯ ನಾಗರಿಕರ ಅನುಭವಗಳು ಸಮಾಜಕ್ಕೆ ಅಗತ್ಯ

Date:

ಉಡುಪಿ: ಹಿರಿಯ ನಾಗರೀಕರ ಜೀವನದ ಅನುಭವಗಳು ಉತ್ತಮ ಸಮಾಜದ ಅಭಿವೃದ್ಧಿಗೆ ಅಗತ್ಯವಿದ್ದು, ಅವುಗಳ ಸದುಪಯೋಗ ಎಲ್ಲರಿಗೂ ದೊರೆಯಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.

ಅವರು ಎಂ.ಜಿ.ಎಂ. ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಕಾರ್ಯವನ್ನು ಮಾಡುವಾಗ ಹಿರಿಯರ ಆಶೀರ್ವಾದ ಪಡೆಯುವ ಸಂಸ್ಕೃತಿ ಇದೆ. ಹಿರಿಯರ ಅನುಭವಗಳು ಮುಂದಿನ ಪೀಳಿಗೆಗೆ ದಾರಿದೀಪವಿದ್ದಂತೆ. ಪ್ರಸ್ತುತ ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿನ ಹಿರಿಯ ನಾಗರಿಕರ ಸಂಘಟನೆಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಮುಂದಿನ ಅಭಿವೃದ್ಧಿಯ ಕುರಿತು ಜಿಲ್ಲೆಯ ಹಿರಿಯ ನಾಗರಿಕರು ತಮ್ಮ ಸಲಹೆ, ಮಾರ್ಗದರ್ಶನಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ತಿಳಿಸಿದರು.

ಸಮಾಜದಲ್ಲಿರುವ ಹಿರಿಯ ನಾಗರಿಕರನ್ನು ಗೌರವಿಸುವ ಮನಸ್ಥಿತಿ ಎಲ್ಲೆಡೆ ಮೂಡಬೇಕಿದೆ. ಅವರನ್ನು ಗೌರವಿಸದೇ ಇರುವವರನ್ನು ಸಮಾಜ ಕೂಡಾ ಗೌರವದಿಂದ ಕಾಣದೇ ಇರುವ ಹಾಗೆ ಆಗಬೇಕಿದೆ. ಹಿರಿಯ ನಾಗರಿಕರಿಗೆ ಸಾಂತ್ವನ ಹಾಗೂ ನೆಮ್ಮದಿಯ ಜೀವನ ಅಗತ್ಯವಿದ್ದು, ಮಕ್ಕಳು ಇವುಗಳನ್ನು ನೀಡಬೇಕು ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಸಮಸ್ಯೆಗಳ ಬಗ್ಗೆ ನಿಯಮಿತವಾಗಿ ಸಭೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸಹಾಯವಾಣಿಗೆ ಬರುವ ದೂರುಗಳ ಕುರಿತು ತಕ್ಷಣ ಸ್ಪಂದಿಸಿ, ಏಕಗವಾಕ್ಷಿ ಮೂಲಕ ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1090 ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ವಕೀಲರ ಸಂಘದ ಅಧ್ಯಕ್ಷ ನಾಗರಾಜ್, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಸಿ.ಎಸ್.ರಾವ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕಿ ರತ್ನ, ಜಿಲ್ಲೆಯ ವಿವಿಧ ಹಿರಿಯ ನಾಗರೀಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವೀಣಾ ವಿವೇಕಾನಂದ ಸ್ವಾಗತಿಸಿ, ವಿಶ್ವನಾಥ್ ಹೆಗಡೆ ವಂದಿಸಿದರು, ರವೀಂದ್ರ ನಿರೂಪಿಸಿದರು. ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ, ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!