ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಅದಮಾರಿನ ಪೂರ್ಣಪ್ರಜ್ಞ ಪಿಯು ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಬಾಲಕರ ತಂಡದಿಂದ ಪ್ರಥಮ ವಿಜ್ಞಾನ ವಿಭಾಗದ ಸನತ್ ಪಿಡಾಯಿ ಹಾಗೂ ಬಾಲಕಿಯರ ತಂಡದ ದ್ವಿತೀಯ ವಾಣಿಜ್ಯ ವಿಭಾಗದ ಸ್ವಾತಿ ಶೆಟ್ಟಿ ಕಾರ್ಕಳ ತಂಡವನ್ನು ಪ್ರತಿನಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಈ ಇಬ್ಬರೂ ವಿದ್ಯಾರ್ಥಿಗಳು ಕಾರ್ಕಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲೂ ಪಂದ್ಯಾಟದ ಸವ್ಯಸಾಚಿ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದರು.
ಕರಾಟೆಯಲ್ಲೂ ಸಾಧನೆ: ಪದವಿ ಪೂರ್ವಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಪ್ರಥಮ ವಿಜ್ಞಾನದ ಚಂದನಾ ಗಂಗಾಧರ್ ನಾಯಕ್ ದ್ವಿತೀಯ ಸ್ಥಾನ ಗಳಿಸಿದ್ದು, ದ್ವಿತೀಯ ವಿಜ್ಞಾನ ವಿಭಾಗದ ಸುಹಾಸ್ ಜೋಳದ್ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸ್ತುತಿ ಜೈನ್ ಎಚ್.ಪಿ ಇವರು ಪ್ರಥಮ ಸ್ಥಾನ ಗಳಿಸಿ ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.