Sunday, November 24, 2024
Sunday, November 24, 2024

ಓದುವ ಹವ್ಯಾಸ ಮೈಗೂಡಿಸಿಕೊಂಡರೆ ಉತ್ತಮ ಸಾಹಿತ್ಯ ರಚನೆ ಸಾಧ್ಯ: ಡಾ. ವಿನ್ಸೆಂಟ್‌ ಆಳ್ವಾ

ಓದುವ ಹವ್ಯಾಸ ಮೈಗೂಡಿಸಿಕೊಂಡರೆ ಉತ್ತಮ ಸಾಹಿತ್ಯ ರಚನೆ ಸಾಧ್ಯ: ಡಾ. ವಿನ್ಸೆಂಟ್‌ ಆಳ್ವಾ

Date:

ಉಡುಪಿ: ಉತ್ತಮ ಬರಹಗಾರನಾಗಬೇಕಾದರೆ ಮೊದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ಮುಂದೆ ಉತ್ತಮ ಸಾಹಿತ್ಯ ರಚನೆಯಾಗಲು ಸಾಧ್ಯವಿದೆ ಎಂದು ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್‌ ಆಳ್ವಾ ಹೇಳಿದರು.

ಅವರು ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನಲ್ಲಿ ಕಥೊಲಿಕ್‌ ಸಭಾ ಉಡುಪಿ ಪ್ರದೇಶ, ಆಮ್ಚೊ ಸಂದೇಶ್‌ ಕೊಂಕಣಿ ಮಾಸಿಕ ಮತ್ತು ಕೊಂಕಣಿ ಸಂಘಟನೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಆಮ್ಚೊಂ ಸಂದೇಶ್‌ ಪ್ರತಿನಿಧಿಗಳ ಮತ್ತು ಬರಹಗಾರರ ಸಮ್ಮೇಳನ ಹಾಗೂ ದಿ. ಜೋಸೆಪ್‌ ಮೇರಿ ಪಿಂಟೊ ನಿಡ್ಡೋಡಿ ಸಾಹಿತ್ಯ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು

ಬರಹಗಾರನಾಗಬೇಕಾದರೆ ಮೊದಲು ನಾವು ಹೆಚ್ಚು ಹೆಚ್ಚು ಓದುವ ಹವ್ಯಾಸವನ್ನು ರೂಡಿಸಿಕೊಂಡಾಗ ನಮ್ಮಲ್ಲಿ ಜ್ಞಾನದ ವೃದ್ದಿಯಾಗುತ್ತದೆ ಇದರಿಂದ ಬರೆಯುವ ಕಲೆ ನಮ್ಮಲ್ಲಿ ಹುಟ್ಟಿಕೊಂಡು ಮುಂದೆ ಸಮಾಜದಲ್ಲಿ ಉತ್ತಮ ಬರಹಗಾರ, ಸಾಹಿತಿಯಾಗಲು ಸಾಧ್ಯವಾಗುತ್ತದೆ ಎಂದರು.

ಕೊಂಕಣಿಯಲ್ಲಿ ಬರೆಯುವ ಯುವ ಸಾಹಿತಿಗಳಿಗೆ ಕಥೊಲಿಕ್‌ ಸಭಾ ಉಡುಪಿ ಪ್ರದೇಶ ಇವರ ಸಹಭಾಗಿತ್ವದಲ್ಲಿ ನೀಡಲಾಗುವ ದಿ. ಜೋಸೆಫ್‌ ಮತ್ತು ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯ ಪುರಸ್ಕಾರ -2021 ಕ್ಕೆ ವಿತಾಶಾ ರಿಯಾ ರೊಡ್ರಿಗಸ್‌ (ಮುದ್ದು ತೀರ್ಥಹಳ್ಳಿ) ಅವರಿಗೆ ಪ್ರದಾನ ಮಾಡಲಾಯಿತು.

ಪ್ರಚಲಿತ ಲೇಖನಗಳನ್ನು ಬರೆಯುವ ಕುರಿತು ದೈಜಿ ವಲ್ಡ್‌ ಮಂಗಳೂರು ಬ್ಯೂರೊ ಮುಖ್ಯಸ್ಥರಾದ ಸ್ಟ್ಯಾನಿ ಬೇಳಾ, ಸಂಪಾದಕರಿಗೆ ಪತ್ರ ಬರೆಯುವ ಕುರಿತು ಆಮ್ಚೊ ಸಂದೇಶ್‌ ಪತ್ರಿಕೆಯ ವಿಲ್ಫ್ರೇಡ್‌ ಲೋಬೊ, ವರದಿಗಾರಿಕೆಯ ಕುರಿತು ಉಡುಪಿ ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕರಾದ ಮೈಕಲ್‌ ರೊಡ್ರಿಗಸ್‌ ಮಾಹಿತಿ ನೀಡಿದರು.
ಕಥೊಲಿಕ್‌ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಮೇರಿ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ದಿವ್ಯದೀಪ ಪ್ರಕಾಶನ ಸಂತೆಕಟ್ಟೆ ಕಲ್ಯಾಣಪುರ ಇದರ ವತಿಯಿಂದ ಮರುಮುದ್ರಣಗೊಂಡ ರಾಕ್ಣೋ ವಾರಪತ್ರಿಕೆಯ ಮಾಜಿ ಸಂಪಾದಕರಾದ ವಂ|ಮಾರ್ಕ್‌ ವಾಲ್ಡರ್‌ ಅವರ ಆತ್ಮಚರಿತ್ರೆ ಲೊಕಾಚೊ ಯಾಜಕ್‌ ಪುಸ್ತಕವನ್ನು ಅನಾವರಣಗೊಳಿಸಲಾಯಿತು.

ಕಥೊಲಿಕ್‌ ಸಭಾ ಉಡುಪಿ ಪ್ರದೇಶ ಇದರ ಪ್ರಧಾನ ಕಾರ್ಯದರ್ಶಿ ಗ್ರೆಗೋರಿ ಪಿಕೆ ಡಿʼಸೋಜಾ, ಮಾಜಿ ಅಧ್ಯಕ್ಷ ಆಲ್ವಿನ್‌ ಕ್ವಾಡ್ರಸ್‌, ಆಮ್ಚೊ ಸಂದೇಶ್‌ ಸಂಚಾಲಕರಾದ ಎಲ್ರೋಯ್‌ ಕಿರಣ್‌ ಕ್ರಾಸ್ಟೊ, ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಕೋಶಾಧಿಕಾರಿ ಮೆಲ್ರಿಡಾ ರೊಡ್ರಿಗಸ್‌, ದಿ. ಜೋಸೆಪ್‌ ಮೇರಿ ಪಿಂಟೊ ನಿಡ್ಡೋಡಿ ಕುಟುಂಬಿಕರಾದ ವಾಲ್ಟರ್‌ ಸಿರಿಲ್‌ ಪಿಂಟೊ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಚಾಲಕರಾದ ಡಾ. ಜೆರಾಲ್ಡ್‌ ಪಿಂಟೊ ಸ್ವಾಗತಿಸಿ, ಎಡ್ವರ್ಡ್‌ ಲಾರ್ಸನ್‌ ಡಿʼಸೋಜಾ ಪೇತ್ರಿ ಅತಿಥಿಗಳ ಪರಿಚಯ ಮಾಡಿದರು. ಕಲ್ಯಾಣಪುರ ವಲಯ ಅಧ್ಯಕ್ಷರಾದ ರೋಜಿ ಬಾರೆಟ್ಟೊ ವಂದಿಸಿ, ಡಾ ಫ್ಲಾವಿಯಾ ಕ್ಯಾಸ್ತಲಿನೊ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!