Friday, September 20, 2024
Friday, September 20, 2024

ಕಾರಂತ ಜನ್ಮೋತ್ಸವ ಪೂರ್ವ ಸಿದ್ಧತೆ

ಕಾರಂತ ಜನ್ಮೋತ್ಸವ ಪೂರ್ವ ಸಿದ್ಧತೆ

Date:

ಕೋಟ: ಜ್ಞಾನಪೀಠ ಪ್ರಶಸ್ತಿ ವಿಜೇತ ಕೋಟ ಶಿವರಾಮ ಕಾರಂತ ಜನ್ಮೋತ್ಸವ ಕಾರ್ಯಕ್ರಮದ ಸಭಾ ವೇದಿಕೆಯ ರಚನೆಯು ಸೇರಿದಂತೆ ಪೂರ್ವ ಸಿದ್ಧತೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವೀಕ್ಷಿಸಿದರು.

ಕೋಟದ ರಾಷ್ಟ್ರೀಯ ಹೆದ್ದಾರಿ ಶ್ರೀ ಶಾಂಭವಿ ಶಾಲೆಯ ಮೈದಾನದಲ್ಲಿ ಕಾರಂತರ ಜನ್ಮದಿನವಾದ ಅಕ್ಟೋಬರ್ 10 ರಂದು ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕಾರಂತರ ಹುಟ್ಟೂರ ಪ್ರಶಸ್ತಿ ಪ್ರಧಾನ ಮಾಡಲಿದ್ದು, ಈ ಬಾರಿ ಪ್ರಶಸ್ತಿಗೆ ಕಲಾವಿದ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ.

ಸುಮಾರು 2000 ಮಂದಿ ಕುಳಿತು ವೀಕ್ಷಿಸಬಹುದಾದ ವಿಶಾಲ ಸುಸಜ್ಜಿತ ಸಭಾ ವೇದಿಕೆ ಸಿದ್ಧತೆ ಮಾಡಲಾಗುತ್ತಿದ್ದು, ಕಾರ್ಯಕ್ರಮದ ನಂತರ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವಿದ್ದು, ಅಪಾರ ಜನ ಸೇರುವ ನಿರೀಕ್ಷೆ ಇದೆ.

ಅಕ್ಟೋಬರ್ 10ರ ಮಧ್ಯಾಹ್ನ ೩.೩೦ಕ್ಕೆ ಕೋಟತಟ್ಟು ಗ್ರಾಮ ಪಂಚಾಯತ್ ನಿಂದ ಪ್ರಶಸ್ತಿ ಪುರಸ್ಕತರೊಂದಿಗೆ ಸಾಂಸ್ಕೃತಿಕ ಮೆರವಣಿಗೆ ಹೊರಡಲಿದ್ದು, ಕಾರಂತ ಪ್ರಶಸ್ತಿಯನ್ನು ಸಕಲ ಗೌರವಗಳೊಂದಿಗೆ ಹೊತ್ತು ಸಾಗುವ ಸಂಪ್ರದಾಯವಿದೆ.

ಕಾರಂತೋತ್ಸವದ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಲು ಬಂದ ಸಚಿವ ಕೋಟರೊಂದಿಗೆ ಕಾರಂತ ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!