Saturday, November 23, 2024
Saturday, November 23, 2024

ಅ.11- ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಅ.11- ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Date:

ಉಡುಪಿ: ಅಕ್ಟೋಬರ್ 11 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮುಂಡ್ಲಿ ಫೀಡರ್‌ನಲ್ಲಿ ಲೈನಿನ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಮುಂಡ್ಲಿ, ದುರ್ಗ, ತೆಳ್ಳಾರ್, ಪೊಲ್ಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಉಡುಪಿ ನಿಟ್ಟೂರಿನಲ್ಲಿರುವ 1*10 ಎಂ.ವಿ.ಎ, 110/11ಕೆವಿ ಪರಿವರ್ತಕವನ್ನು 1*20 ಎಂ.ವಿ.ಎ ಗೆ ಉನ್ನತೀಕರಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಸದರಿ ಕಾಮಗಾರಿಗೆ ಸಂಬಂಧಿಸಿದಂತೆ 11ಕೆವಿ ಯು.ಜಿ ಕೇಬಲ್ ಹಾಗೂ ಕಂಟ್ರೋಲ್ ಕೇಬಲ್‌ಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, 110/33/11ಕೆವಿ ನಿಟ್ಟೂರು ಸ್ಥಾವರದಿಂದ ಹೊರಡುವ ಎಲ್ಲಾ 11ಕೆವಿ ಫೀಡರಿನಲ್ಲಿ ಉಡುಪಿ ನಗರ ಪ್ರದೇಶಗಳಾದ, ಅಂಬಲಪಾಡಿ, ಕಿನ್ನಿಮುಲ್ಕಿ, ಕನ್ನರ್ಪಾಡಿ, ಅಜ್ಜರಕಾಡು, ಬನ್ನಂಜೆ, ಕೊಡವೂರು, ಆದಿಉಡುಪಿ, ಮೂಡಬೆಟ್ಟು, ಕಂಗನಬೆಟ್ಟು, ಕಲ್ಮಾಡಿ, ಮೇಲ್ಪೇಟೆ, ಮಲ್ಪೆ, ತೆಂಕನಿಡಿಯೂರು, ಬಡಾನಿಡಿಯೂರು, ಕೊಳ, ತೊಟ್ಟಂ, ನಿಟ್ಟೂರು, ಅಡ್ಕದಕಟ್ಟೆ, ಬಾಳಿಗ ಫಿಶ್ ನೆಟ್, ಪುತ್ತೂರು, ಪೆರಂಪಳ್ಳಿ, ದೊಡ್ಡಣಗುಡ್ಡೆ, ಕಲ್ಯಾಣಪುರ, ಶಾಂತಿವನ, ಪೊಟ್ಟುಕೆರೆ, ಗರಡಿಮಜಲು, ತೆಂಕನಿಡಿಯೂರು, ಸುಬ್ರಹ್ಮಣ್ಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕೆ.ಎಂ.ಎಫ್ ಮತ್ತು ಮೂಡುಬೆಳ್ಳೆ ಫೀಡರಿನಲ್ಲಿ ಹಾಗೂ 110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮಾಣೈ ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಹರಿಖಂಡಿಗೆ, ವಡ್ಜ, ಸಾಣೆಕಲ್ಲು, ಮಾಣೈ, ನವಗ್ರಾಮ, ಪಂಚನಬೆಟ್ಟು, ಮೂಂಡುಜೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಮೆ|ಕೊಂಕಣ್ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ ರವರು ರೈಲ್ವೆ ಮಾರ್ಗದ ವಿದ್ಯುದೀಕರಣಕ್ಕಾಗಿ ನಿರ್ಮಿಸುತ್ತಿರುವ 110/27ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡಲು ನಿರ್ಮಿಸಲಾಗುತ್ತಿರುವ 110ಕೆವಿ ವಿದ್ಯುತ್ ಕೇಂದ್ರ(ಮೀಟರಿಂಗ್) ಮತ್ತು 110ಕೆವಿ ಲಿಲೋ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ಪ್ರೆಸ್ ಮತ್ತು ಮಂದಾರ್ತಿ ಫೀಡರಿನಲ್ಲಿ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡು ನೀಲಾವರ, ಬೆಣ್ಣೆಕುದ್ರು, ಹೆಗ್ಗುಂಜೆ, ಮೈರ್ ಕೋಮೆ, ಶಿರೂರು, ವಾಜನೂರು, ಆವರ್ಸೆ, ಮುದ್ದುಮನೆ, ಕಿರಾಡಿ, ನಂಚಾರು, ಹಿಲಿಯಾಣ, ಆಮ್ರಕಲ್ಲು, ನೀರ್ ಜೆಡ್ಡು, ಮಂದಾರ್ತಿ, ಮುಂಡಾಡಿ, ಕಾಡೂರು, ನಡೂರು, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಚೇರ್ಕಾಡಿ, ಕೊಕ್ಕರ್ಣೆ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ. ಫಾರ್ಮ್ಸ್, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿ ಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಎಲ್ಲೂರು, ಯಾಶ್ ಟೆಕ್, ಬೆಳಪು ಫೀಡರಿನಲ್ಲಿ ಹಾಗೂ 110/11ಕೆವಿ ಮಣಿಪಾಲ ಎಂ.ಯು.ಎಸ್.ಎಸ್ ನಿಂದ ಹೊರಡುವ 11ಕೆವಿ ಉದ್ಯಾವರ-2 ಫೀಡರಿನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಯಾಶ್ ಟೆಕ್, ಪಣಿಯೂರು, ಬರ್ಪಾಣಿ, ಎಲ್ಲೂರು, ಅದಮಾರು, ಕುಂಜನಗುಡ್ಡೆ, ಗುರುಗುಂಡಿ, ಕುತ್ಯಾರು, ಬೆಳಪು, ಇಂಡಸ್ಟ್ರಿಯಲ್ ಲೇ ಔಟ್, ಅಚ್ಚಡ, ಕಟಪಾಡಿ, ಮಟ್ಟು, ಯೇಣಗುಡ್ಡೆ, ಕೋಟೆ, ಪೊಸಾರು, ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೋಟೇಶ್ವರ ಮತ್ತು ತೆಕ್ಕಟ್ಟೆ ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವ್ಯಾಪ್ತಿ, ಹಂಗ್ಳೂರು, ಕೋಟೇಶ್ವರ, ಕುಂಭಾಶಿ, ತೆಕ್ಕಟ್ಟೆ, ಬೀಜಾಡಿ ಮತ್ತು ಗೋಪಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!