Sunday, January 19, 2025
Sunday, January 19, 2025

ಅಂಗದಾನದ ಮೂಲಕ ಸಾರ್ಥಕತೆ ಮೆರೆದ ಎಂಐಟಿ ವಿದ್ಯಾರ್ಥಿ

ಅಂಗದಾನದ ಮೂಲಕ ಸಾರ್ಥಕತೆ ಮೆರೆದ ಎಂಐಟಿ ವಿದ್ಯಾರ್ಥಿ

Date:

ಮಣಿಪಾಲ: 19 ವರ್ಷದ ಎಂಐಟಿ ವಿದ್ಯಾರ್ಥಿ ವೆಮುಲಾ ಸುದರ್ಶನ್ ಚೌಧರಿ (ಆಂಧ್ರಪ್ರದೇಶ) ಇವರಿಗೆ ಮಣಿಪಾಲ – ಉಡುಪಿ ರಸ್ತೆಯಲ್ಲಿ 9.10.2022ರಂದು ರಾತ್ರಿ ಗಂಟೆ 8.40 ಸುಮಾರಿಗೆ ರಸ್ತೆ ಅಪಘಾತ ಸಂಭವಿಸಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುಜಾಲ ಮಂಡಾಲ್, ಆಂಧ್ರಪ್ರದೇಶ ಇಲ್ಲಿನ ವೆಮುಲ ಅಲೇಖಾ ಪ್ರಸಾದ್ ಇವರ ಮಗನಾದ ವೆಮುಲಾ ಸುದರ್ಶನ್ ಚೌಧರಿ ಅವರು ಅಪಘಾತದ ಪರಿಣಾಮದಿಂದ ತೀವ್ರತರವಾದ ಗಾಯವನ್ನು ಹೊಂದಿದ್ದರು.

ಕೆ.ಎಂ.ಸಿ ವೈದ್ಯರು ವೆಮುಲಾ ಸುದರ್ಶನ್ ಚೌಧರಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ವೆಮುಲಾ ಸುದರ್ಶನ್ ಚೌಧರಿ ಅವರ ತಂದೆ ಮತ್ತು ಅವರ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು.

ತರುವಾಯ ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ವೆಮುಲಾ ಸುದರ್ಶನ್ ಚೌಧರಿ ಅವರನ್ನು 6 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು. ಮೊದಲನೆಯದು 11.10. 2022 ರಂದು ಸಂಜೆ 4. 10ಕ್ಕೆ ಮತ್ತು ಎರಡನೆಯದು 11.10.2022 ರಂದು ರಾತ್ರಿ 11.42ಕ್ಕೆ.

ಜೀವನಸಾರ್ಥಕತೆ ಪ್ರೋಟೋಕಾಲ್ ಗಳು ಮತ್ತು ನಿರ್ಧಾರಗಳ ಪ್ರಕಾರ, ನೋಂದಾಯಿತ ರೋಗಿಗಳಿಗೆ, ಯಕೃತ್ತು ಕೆಎಂಸಿ ಆಸ್ಪತ್ರೆ ಅಂಬೇಡ್ಕರ್ ಸರ್ಕಲ್ ಮಂಗಳೂರಿಗೆ, ಶ್ವಾಸಕೋಶ ಆಸ್ಟರ್ ಆಸ್ಪತ್ರೆ ಬೆಂಗಳೂರಿಗೆ, ಒಂದು ಮೂತ್ರಪಿಂಡ ಎಜೆ ಆಸ್ಪತ್ರೆ ಮಂಗಳೂರಿಗೆ ಕಳುಹಿಸಿಕೊಡಲಾಯಿತು. ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳು, ಒಂದು ಮೂತ್ರಪಿಂಡ ಮತ್ತು ಚರ್ಮ ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು.

ವೆಮುಲ ಅಲೇಖಾ ಪ್ರಸಾದ್ ಮತ್ತು ಕುಟುಂಬ ಸದಸ್ಯರು ಅಂಗದಾನ ಒಂದು ಪುಣ್ಯದ ಕೆಲಸ. ಸುದರ್ಶನ್ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ ಎಂದು ತಿಳಿಸಿದ್ದಾರೆ. ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ, ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ ಎಂದು ತಿಳಿಸಿ ಅಂಗದಾನ ಮಾಡಲು ನಿರ್ಧರಿಸಿದ ವೆಮುಲಾ ಸುದರ್ಶನ್ ಚೌಧರಿ ಕುಟುಂಬಕ್ಕೆ ಕ್ರತಜ್ಞತೆ ಸಲ್ಲಿಸಿದರು.

ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಲ್ಲಿ ದಿನದಿಂದ ದಿನಕ್ಕೆ ಜಾಗೃತಿ ಹೆಚ್ಚಾಗುತ್ತಿರುವುದು ಒಳ್ಳೆಯ ಸಂಗತಿ ಎಂದು ಅಭಿಪ್ರಾಯಪಟ್ಟರು. ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಮತ್ತು ಬೆಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ವರ್ಗಾಯಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!