Monday, November 25, 2024
Monday, November 25, 2024

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

Date:

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಅಕ್ಟೋಬರ್ 17 ರಂದು ಬೈಂದೂರು ಪ್ರವಾಸಿ ಮಂದಿರ, ಅ.18 ರಂದು ಕುಂದಾಪುರ ಪ್ರವಾಸಿ ಮಂದಿರ, ಅ.19 ರಂದು ಹೆಬ್ರಿ ಪ್ರವಾಸಿ ಮಂದಿರ, ಅ.20 ರಂದು ಕಾರ್ಕಳ ಪ್ರವಾಸಿ ಮಂದಿರ, ಅ.21 ರಂದು ಬ್ರಹ್ಮಾವರ ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣ ಹಾಗೂ ಅ.25 ರಂದು ಕಾಪು ಪುರಸಭೆ ಕಚೇರಿ ಆವರಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದು, ಸಾರ್ವಜನಿಕರು ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭವಿಸಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!