ಬ್ರಹ್ಮಾವರ: ನೀಲಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಲಿಕುದ್ರು ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಯೋಜನೆಯಡಿ ರೂ. 50.00 ಲಕ್ಷ ಮಂಜೂರಾಗಿರುತ್ತದೆ. ರಸ್ತೆ ಕಾಮಗಾರಿಗೆ ಶಾಸಕ ಕೆ. ರಘುಪತಿ ಭಟ್ ಗುದ್ದಲಿ ಪೂಜೆ ನೆರವೇರಿಸಿದರು.
ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಉಪಾಧ್ಯಕ್ಷರಾದ ಬೇಬಿ, ರಾಜ್ಯ ಎಸ್.ಟಿ. ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.