Thursday, September 24, 2026
Thursday, September 24, 2026

ಬ್ರಹ್ಮಾವರ- ಪರಿಸರ ಕೃಷಿ ವಿಧಾನಗಳ ತರಬೇತಿ

ಬ್ರಹ್ಮಾವರ- ಪರಿಸರ ಕೃಷಿ ವಿಧಾನಗಳ ತರಬೇತಿ

Date:

ಬ್ರಹ್ಮಾವರ: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ,ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮವಾರ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿ ಸಖಿಯರಿಗೆ) ಪರಿಸರ ಕೃಷಿ ವಿಧಾನಗಳ ಕುರಿತ 6 ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರಲ್ಲಿ ನೆಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ್ ಆಚಾರ್ ಇವರು ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ, ಈಗಾಗಲೇ ಸರಕಾರದಿಂದ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಸಂಜೀವಿನಿ ಸ್ವ ಸಹಾಯ ಸಂಘದ ಮಹಿಳೆಯರಿಗೆ ಕೃಷಿ ಜೀವನೋಪಾಯ ವಿಷಯಗಳ ಬಗ್ಗೆ ಮಾಹಿತಿ, ವಿವಿಧ ತರಬೇತಿ ಹಾಗು ಸರಕಾರದ ಯೋಜನೆಗಳನ್ನು ತಲುಪಿಸಲು ಕೃಷಿ ಸಖಿಯರನ್ನು ನಿಯೋಜನೆ ಮಾಡಲಾಗಿದೆ.

ಈ ಕೃಷಿ ಸಖಿಯರು ತಮ್ಮ ಗ್ರಾಮದ ಸಂಜೀವಿನಿ ಮಹಿಳೆಯರಿಗೆ ಕೃಷಿ ಸಂಬಂಧಿಸಿದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ತಾವು ತರಬೇತಿಯಲ್ಲಿ ತಿಳಿದುಕೊಂಡ ಪರಿಸರ ಕ್ರಷಿ ವಿಧಾನ ವಿಷಯಗಳನ್ನು ಗ್ರಾಮೀಣ ಮಟ್ಟದ ಸಂಜೀವಿನಿ ಮಹಿಳೆಯರಿಗೆ ಮಾಹಿತಿ ನೀಡುವುದರ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳನ್ನು ಇನ್ನಷ್ಟು ಉತ್ತಮ ಪಡಿಸಲು ಇಲಾಖೆಯ ಜೊತೆ ಸಹಕರಿಸುವಂತೆ ತಿಳಿಸಿದರು.

ಕೃಷಿ ಕೇಂದ್ರ ಬ್ರಹ್ಮಾವರ ಮುಖ್ಯಸ್ಥರಾದ ಡಾ. ಬಿ ಧನಂಜಯ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿ ಸಖಿಯರು ಕೃಷಿ ಹಿನ್ನಲೆಯಿಂದ ಬಂದವರಾಗಿರಿವುದರಿಂದ ಇತರೆ ಮಹಿಳೆಯರಿಗೆ ಕೃಷಿ ಬಗ್ಗೆ ಉತ್ತಮ ಮಾರ್ಗದರ್ಶನ ನೀಡಬೇಕು.

ಇಂದು ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಬಹಳಷ್ಟು ಅಭಿವೃದ್ಧಿಗೊಳುತ್ತಿದ್ದು ಅದ್ದಕ್ಕೆ ಪೂರಕವಾಗಿ ಯೋಜನೆಗಳನ್ನು ಗ್ರಾಮೀಣ ಮಹಿಳೆಯರಿಗೆ ತಲುಪಿಸಲು ಪ್ರಯತ್ನಿಸಬೇಕೆಂದು ತಿಳಿಸಿದರು. ಕೃಷಿ ಕೇಂದ್ರ ಬ್ರಹ್ಮಾವರ ವಿಜ್ಞಾನಿ ಡಾ. ಚೈತನ್ಯ ಹೆಚ್ ಎಸ್., ಜಿಲ್ಲಾ ವ್ಯವಸ್ಥಾಪಕಿ ನವ್ಯ ಉಪಸ್ಥಿತರಿದ್ದರು. ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಸ್ವಾಗತಿಸಿ, ಯುವ ವೃತಿಪರರಾದ ಜಯಮಾಲಾ ವಂದಿಸಿದರು. ಕೃಷಿ ಕೇಂದ್ರ ಬ್ರಹ್ಮಾವರ ವಿಜ್ಞಾನಿ ಡಾ. ಸಚಿನ್ ಯು ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!