Wednesday, July 22, 2026
Wednesday, July 22, 2026

ವಿ.ಕೆ.ಆರ್. ಶಾಲೆ- ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ

ವಿ.ಕೆ.ಆರ್. ಶಾಲೆ- ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ

Date:

ಕುಂದಾಪುರ: ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ನೇತೃತ್ವದ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಶನಿವಾರ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ನಾಗರಾಜ್ ಕಟೀಲ್ ವಿದ್ಯಾರ್ಥಿಗಳನ್ನುದ್ದೇಶಿಸಿ ವೃತ್ತಿಪರ ಮಾರ್ಗದರ್ಶನದ ಕುರಿತು ಮಾಹಿತಿ ನೀಡಿದರು.

ವೃತ್ತಿಪರ ಬದುಕಿನ ಹಾದಿಗೆ ಮೊದಲ ಮೈಲಿಗಲ್ಲೇ ಎಸ್.ಎಸ್.ಎಲ್‍.ಸಿ ಹಂತ. ಇದು ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಹೇಗೆ ಪೂರಕವಾದದ್ದು ಮತ್ತು ಆ ಹಾದಿಯ ವಿವಿಧ ಮಜಲುಗಳು ಹೇಗಿರುತ್ತದೆ ಎನ್ನುವುದನ್ನು ಸವಿಸ್ತಾರವಾಗಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಾಗರಾಜ ಕಟೀಲ್‍ ವಿದ್ಯಾರ್ಥಿಗಳಗೆ ಮಾರ್ಗದರ್ಶನ ನೀಡಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಚಿಂತನಾ ರಾಜೇಶ್ ವಹಿಸಿದ್ದರು. ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಶೆಟ್ಚಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ ಉಪಸ್ಥಿತರಿದ್ದರು. ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!