Saturday, January 18, 2025
Saturday, January 18, 2025

ಅಬ್ಬನಡ್ಕ ಸಂಸ್ಥೆಯ ಕಾರ್ಯಕ್ರಮಗಳು ಎಲ್ಲರಿಗೂ ಆದರ್ಶ: ಗಣೇಶ್ ಪ್ರಸಾದ್

ಅಬ್ಬನಡ್ಕ ಸಂಸ್ಥೆಯ ಕಾರ್ಯಕ್ರಮಗಳು ಎಲ್ಲರಿಗೂ ಆದರ್ಶ: ಗಣೇಶ್ ಪ್ರಸಾದ್

Date:

ಉಡುಪಿ: ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಆದಿತ್ಯವಾರ ಗ್ರಾಮಿಣಾಭಿವೃದ್ಧಿಯಲ್ಲಿ ಸಂಘ- ಸಂಸ್ಥೆಗಳ ಪಾತ್ರದ ಕುರಿತು ಮಾಹಿತಿ ಕಾರ್ಯಾಗಾರ ಜರಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ಆರ್ಗನೈಸೇಶನ್ ಫಾರ್ ರೂರಲ್ ಡೆವಲಪ್ಮೆಂಟ್ ಎಜ್ಯುಕೇಶನ್ ಆಂಡ್ ರಿಸರ್ಚ್ ಸ್ಥಾಪಕರಾದ ಗಣೇಶ್ ಪ್ರಸಾದ್ ಜಿ. ನಾಯಕ್ ಮಾತನಾಡಿ, ನಿರಂತರ ವೈಶಿಷ್ಟ್ಯಪೂರ್ಣ ಸಾಮಾಜಿಕ ಚಟುವಟಿಕೆಗಳ ಮೂಲಕ ತೊಡಗಿಸಿಕೊಂಡಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಸ್ಥೆಯ ಕಾರ್ಯಕ್ರಮಗಳು ಎಲ್ಲರಿಗೂ ಆದರ್ಶ ಎಂದು ಹೇಳಿದರು.

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಸಂಘದ ನಿಕಟಪೂರ್ವಾಧ್ಯಕ್ಷ ಉದಯ ಅಂಚನ್ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಸತೀಶ್ ಅಬ್ಬನಡ್ಕ, ಉಪಾಧ್ಯಕ್ಷೆ ಲೀಲಾ ಪೂಜಾರಿ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಜೊತೆ ಕಾರ್ಯದರ್ಶಿ ಅಶ್ವಿನಿ ಪ್ರಭಾಕರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಸ್ವಸಹಾಯ ಸಂಘದ ಅಧ್ಯಕ್ಷೆ ವೀಣಾ ಪೂಜಾರಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಕೀರ್ತನ್ ಕುಮಾರ್, ಸದಸ್ಯರಾದ ಸಂಧ್ಯಾ ಶೆಟ್ಟಿ, ಹರೀಶ್ ಪೂಜಾರಿ, ಸುರೇಶ್ ಅಬ್ಬನಡ್ಕ, ಪುಷ್ಪ ಕುಲಾಲ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...

ಗಾನ ಸಂಭ್ರಮ 2025 ಸಂಪನ್ನ

ಕುಂದಾಪುರ, ಜ.18: ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ...

ರಾಷ್ಟ್ರಮಟ್ಟದ ಅಬಾಕಸ್‌: ಎಚ್.‌ಎಮ್.‌ಎಮ್ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ, ಜ.18: ಕುಂದಾಪುರ ಎಜ್ಯುಕೇಶನ್‌ ಸೊಸೈಟಿ (ರಿ.) ಪ್ರವರ್ತಿತ ಎಚ್.‌ಎಮ್‌. ಎಮ್‌...
error: Content is protected !!