Thursday, November 28, 2024
Thursday, November 28, 2024

ಅಂಬೇಡ್ಕರ್ ಓದು ಕಾರ್ಯಕ್ರಮ

ಅಂಬೇಡ್ಕರ್ ಓದು ಕಾರ್ಯಕ್ರಮ

Date:

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ತಾಲೂಕು ಘಟಕ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇವರ ಸಹಯೋಗದೊಂದಿಗೆ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಚಿಂತಕ ನಾರಾಯಣ ಮಣೂರು ಮಾತನಾಡಿ, ರಾಜ ಪ್ರಭುತ್ವದಿಂದ ಪ್ರಜಾಪ್ರಭುತ್ವದ ಪರಿಕಲ್ಪನೆಯ ಕನಸು ಕಂಡವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್. ಮೀಸಲಾತಿ ಮಾತ್ರವಲ್ಲದೆ ಅನೇಕ ಸೌಲಭ್ಯಗಳಿಗೆ ಕಾರಣಿಭೂತವಾದ ಕಾನೂನು ಜಾರಿಯಾಗಲು ಹಾಗೂ ಆರ್ಥಿಕ ಅಭಿವೃದ್ಧಿ, ನೀರಾವರಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬದುಕಿನ ಸಕಾರಾತ್ಮಕ ಬದಲಾವಣೆಗಳಿಗೆ ಅಂಬೇಡ್ಕರ್ ರವರು ಶ್ರಮಿಸಿದ ಬಗೆಯನ್ನು ವಿವರಿಸಿದರು.

ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ಘಟಕದ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಡಾ. ರಘು ನಾಯ್ಕ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದ ಸಂಚಾಲಕ ಡಾ. ಸಣ್ಣಚಿಕ್ಕಯ್ಯ, ಕನ್ನಡ ವಿಭಾಗ ಮುಖ್ಯಸ್ಥ ನಾಗರಾಜ್ ಶೆಟ್ಟಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಪುಸ್ತಕ, ನಗದು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕನ್ನಡ ಸಹಾಯಕ ಪ್ರಾಧ್ಯಾಪಕ ನವೀನ್ ಎಚ್ ಜೆ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಕಡ್ಡಾಯ

ಉಡುಪಿ, ನ.27: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ...

ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್’

ಮೂಡುಬಿದಿರೆ, ನ.27: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್...

ದೇಶದ ಸಂಸ್ಕೃತಿಯಲ್ಲಿ ಸಂವಿಧಾನದ ಬೇರು

ವಿದ್ಯಾಗಿರಿ (ಮೂಡುಬಿದಿರೆ), ನ.27: ನಮ್ಮ ಸಂವಿಧಾನದ ಮೂಲತತ್ವಗಳ ಬೇರು ದೇಶದ ಇತಿಹಾಸ,...

ಯಕ್ಷಾರಾಧನೆ ರಂಗದೋಕುಳಿ

ಕೋಟ, ನ.27: ಒಂದು ಕಾಲದಲ್ಲಿ ಯಕ್ಷಗಾನದ ಮಹತ್ವ ಅರಿತವರು ಬಹಳ ವಿರಳವಾಗಿದ್ದರು,...
error: Content is protected !!