ಉಡುಪಿ: ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗಿದ್ದು ಕರಂಬಳ್ಳಿ ವಾರ್ಡಿನ ಭಾಗದಲ್ಲಿ ಹಡಿಲು ಭೂಮಿ ಕೃಷಿ ಮಾಡಲಾದ ಗದ್ದೆಗಳಲ್ಲಿ ಬೆಳೆದ ಕಳೆಗಳನ್ನು ತೆಗೆಯುವ ಕಾರ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಮತ್ತು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಸಹಯೋಗದೊಂದಿಗೆ ನಡೆಯಿತು.
ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಈ ಕಾರ್ಯದಲ್ಲಿ ತೊಡಗಿಸಿಕೊಂಡ ಉಭಯ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಸುರೇಶ್ ರೈ, ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ, ಎನ್.ಎಸ್.ಎಸ್. ಸಂಯೋಜನಾಧಿಕಾರಿ ಸುಷ್ಮಾ ಟಿ., ಡಾ. ಮಹೇಶ್ ಕುಮಾರ್ ಕೆ.ಇ., ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿ ರಾಘವೇಂದ್ರ ಕಿಣಿ, ಟ್ರಸ್ಟಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕುಮಾರ್, ಕೇದಾರೋತ್ಥಾನ ಟ್ರಸ್ಟ್ ಕಾರ್ಯಕರ್ತ ರಿಕೇಶ್ ಕಡೆಕಾರ್ ಮುಂತಾದವರು ಉಪಸ್ಥಿತರಿದ್ದರು.