Monday, February 24, 2025
Monday, February 24, 2025

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

Date:

ಉಡುಪಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 1 ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ.

ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು. ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು ಸೇರಿದಂತೆ ಶಿಷ್ಠಾಚಾರದಂತೆ ಎಲ್ಲರನ್ನೂ ಆಹ್ವಾನಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಅಂದು ಬೆಳಗ್ಗೆ 8 ಗಂಟೆಗೆ ಬೋರ್ಡ್ ಸ್ಕೂಲ್ ನಿಂದ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು. ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದ್ದು, ಮೆರವಣಿಗೆಗೆ ಚಲನಚಿತ್ರ ನಟರನ್ನು, ಕಲಾವಿದರನ್ನು ಆಹ್ವಾನಿಸುವಂತೆ ಸಲಹೆ ನೀಡಿದರು.

ಅಕ್ಟೋಬರ್ 28 ರಂದು ನಡೆಯುವ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಹೆಚ್ಚು ಸಾರ್ವಜನಿಕರು ಶಾಲಾ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕರಿಗಳು ಹಾಗೂ ಸದಸ್ಯರು ನೊಂದಣಿಯನ್ನು ಮಾಡಿಕೊಳ್ಳುವುದರೊಂದಿಗೆ ಗಾಯನದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆ

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್ ಆರ್., ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!