ಮಣಿಪಾಲ: ಸಂಜೀವಿನಿ ಯೋಜನೆಯ ಅನುಷ್ಠಾನದಲ್ಲಿ ತಳ ಹಂತದಲ್ಲಿ ಸೇವೆ ಸಲ್ಲಿಸುವವರು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಪ್ರತಿಯೊಂದು ಸಂಜೀವಿನಿ ಸ್ವ ಸಹಾಯ ಗುಂಪುಗಳ ಗ್ರಾಮೀಣ ಮಹಿಳೆಯರನ್ನು ತಲುಪಿ ಮಹಿಳಾ ಸಬಲೀಕರಣದತ್ತ ಪ್ರೇರೇಪಿಸುವುದು ಅತ್ಯಂತ ಮಹತ್ವಪೂರ್ಣ ಕಾರ್ಯವಾಗಿದೆ.
ಈ ಮಹತ್ಕಾರ್ಯದಲ್ಲಿ ತಾವು ತೊಡಗಿಸಿಕೊಂಡಿರುವುದು ಶ್ಲಾಘನೀಯ. ಸರಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಹಾಗೂ ಗ್ರಾಮೀಣ ಮಹಿಳೆಯರನ್ನು ಜೀವನೋಪಾಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವರೇ; ಪ್ರೇರೇಪಿಸುವುದು ಅತ್ಯಂತ ಮುಖ್ಯ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್ ಹೇಳಿದರು.
ಜಿಲ್ಲಾ ಪಂಚಾಯತಿ, ಉಡುಪಿ ಇವರು ಜಿಲ್ಲಾ ಸಂಪನ್ಮೂಲ ಕೇಂದ್ರ, ರಜತಾದ್ರಿ ಮಣಿಪಾಲ ಇಲ್ಲಿ ನಡೆದ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ 5 ದಿನಗಳ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.
ಮಹಿಳೆಯರ ಜೀವನೋಪಾಯ ಕ್ಕೆ ಸಂಬಂಧಪಟ್ಟಂತೆ ಹೊಸ ಹೊಸ ಸೃಜನಾತ್ಮಕ ಯೋಜನೆಗಳನ್ನು ಸಿದ್ಧಪಡಿಸಿ ಮಾಹಿತಿ ನೀಡಿ, ಸಂಜೀವಿನಿ ಸ್ವ ಸಹಾಯ ಗುಂಪುಗಳ ಬಲವರ್ಧನೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಪ್ರಭಾಕರ್ ಆಚಾರ್, ರಾಜ್ಯ ಸಂಪನ್ಮೂಲ ವ್ಯಕ್ತಿ ಲಕ್ಷ್ಮಣ್ ಗೌಡ, ಜಿಲ್ಲಾ ವ್ಯವಸ್ಥಾಪಕರಾದ ನವ್ಯಾ ಹಾಗೂ ಅವಿನಾಶ್ ಮತ್ತಿತರರು ಉಪಸ್ಥಿತರಿದ್ದರು.