Sunday, January 19, 2025
Sunday, January 19, 2025

ಪ್ರತಿ ಮನೆಯಲ್ಲೂ ಆಯುರ್ವೇದ ಬಳಕೆಯಾಗಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಪ್ರತಿ ಮನೆಯಲ್ಲೂ ಆಯುರ್ವೇದ ಬಳಕೆಯಾಗಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ಮಾನವನ ಪ್ರತಿದಿನದ ದಿನಚರಿ ಹಾಗೂ ಜೀವನ ವಿಧಾನ ಯಾವ ರೀತಿ ಇರಬೇಕು ಎಂಬುದನ್ನು ತಿಳಿಸುವ ಆಯುರ್ವೇದ ಪದ್ದತಿಯು ಪ್ರತಿದಿನ ಪ್ರತೀ ಮನೆಯಲ್ಲಿಯೂ ಬಳಕೆಯಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಉಡುಪಿ ಹಾಗೂ ಆಯುಷ್ ಫೆಡರೇಷನ್ ಆಫ್ ಇಂಡಿಯಾ ಉಡುಪಿ ತಾಲೂಕು ಇವರ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ಪ್ರಕೃತಿಯೊಂದಿಗೆ ಜೀವನ ನಡೆಸುವ ಮಾನವನ ಜೀವನ ವಿಧಾನವು ಯಾವ ರೀತಿಯಲ್ಲಿ ಪ್ರಕೃತಿಗೆ ಹತ್ತಿರವಾಗಿ ಆರೋಗ್ಯಕರವಾಗಿ ಜೀವನ ನಡೆಸಬೇಕು ಎಂಬ ಬಗ್ಗೆ ತಿಳಿಸುವ ಆಯುರ್ವೇದ ಪದ್ದತಿಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು.

ಆಯುರ್ವೇದ ಸೂತ್ರ ಪಾಲಿಸಿ: ಆಧುನಿಕ ವೈದ್ಯಕೀಯ ಪದ್ದತಿಯಲ್ಲಿ ಅನಾರೋಗ್ಯ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತದೆ, ಆದರೆ ಆಯುರ್ವೇದವು ಆರೋಗ್ಯಕರ ವ್ಯಕ್ತಿಯು ತಮ್ಮ ಆರೋಗ್ಯವನ್ನು ಪ್ರತಿದಿನದ ತನ್ನ ಜೀವನ ಪದ್ದತಿಯಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂದು ತಿಳಿಸುತ್ತದೆ, ಅಲ್ಲದೇ ಇದರಲ್ಲಿ ಯಾವುದೇ ಅಡ್ಡಪರಿಣಾಮಗಳಿಲ್ಲ. ಆಯುರ್ವೇದ ಸೂತ್ರಗಳನ್ನು ಪ್ರತಿದಿನದ ದಿನಚರಿಯಲ್ಲಿ ಪಾಲಿಸಬೇಕು ಎಂದರು.

ಆಯುಷ್ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ: ಕೆ ಉದಯ್ ಕುಮಾರ್ ಶೆಟ್ಟಿ

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ ಮಾತನಾಡಿ, ಕೋವಿಡ್ ನಂತರ ಆಯುರ್ವೇದದ ಮಹತ್ವ ಕುರಿತು ಹೆಚ್ಚಿನ ಜಾಗೃತಿ ಮೂಡಿದೆ. ಆಯುಷ್ ಆಸ್ಪತ್ರೆಯಲ್ಲಿ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಸಾರ್ವಜನಿರಿಗೆ ತಿಳಿಸಬೇಕು ಎಂದರು.

ಆಯುರ್ವೇದದಿಂದ ಉತ್ತಮ ಆರೋಗ್ಯ: ಮಟ್ಟಾರು ರತ್ನಾಕರ ಹೆಗ್ಡೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸ ಇರುವ ಅಯುರ್ವೇದ ಬಳಕೆಯಿಂದ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರೆಯಲಿದ್ದು, ಇಡೀ ವಿಶ್ವವೇ ಇಂದು ಭಾರತದ ಆಯುರ್ವೇದ ಪದ್ದತಿಯನ್ನು ಬೆರಗಿನಿಂದ ನೋಡುತ್ತಿದ್ದು, ಇದು ಜೀವನದಲ್ಲಿ ಪ್ರತಿದಿನ ಬಳಕೆಯಾಗಲಿ ಎಂದರು.

ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ನಾರಾಯಣ ಅಂಚನ್ ಉಪಸ್ಥಿತರಿದ್ದರು. ಆಯುರ್ವೇದದ ಮಹತ್ವ ಕುರಿತು ಉದ್ಯಾವರ ಎಸ್.ಡಿ.ಎಂ ಕಾಲೇಜಿನ ಪ್ರಾಚಾರ್ಯ ಡಾ.ಯೋಗೇಶ್ ಆಚಾರ್ಯ ಉಪನ್ಯಾಸ ನೀಡಿದರು. ಆಯುರ್ವೇದ ಸಸ್ಯಗಳ ವಿತರಣೆ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಸ್ವಾಗತಿಸಿ, ಡಾ.ವೀಣಾ ಕಾರಂತ ವಂದಿಸಿದರು. ಡಾ.ಸರ್ವೋತ್ತಮ ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!