Friday, June 19, 2026
Friday, June 19, 2026

ಅ. 28- ಮೀನು ಮಾರಾಟ ಫೆಡರೇಶನ್ ನೇತೃತ್ವದಲ್ಲಿ ಮಲ್ಪೆ ಸಮುದ್ರ ಮಧ್ಯದಲ್ಲಿ ಕೋಟಿ ಕಂಠ ಗಾಯನ: ಯಶ್ಪಾಲ್ ಸುವರ್ಣ

ಅ. 28- ಮೀನು ಮಾರಾಟ ಫೆಡರೇಶನ್ ನೇತೃತ್ವದಲ್ಲಿ ಮಲ್ಪೆ ಸಮುದ್ರ ಮಧ್ಯದಲ್ಲಿ ಕೋಟಿ ಕಂಠ ಗಾಯನ: ಯಶ್ಪಾಲ್ ಸುವರ್ಣ

Date:

ಉಡುಪಿ: ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಮತ್ತು ಮಹಾಲಕ್ಷ್ಮೀ ಬ್ಯಾಂಕ್ ಲಿ. ಉಡುಪಿ ಇದರ ವತಿಯಿಂದ ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಅಕ್ಟೋಬರ್ 28 ಪೂರ್ವಾಹ್ನ 10 ಗಂಟೆಗೆ ಮಲ್ಪೆ ಅರಬ್ಬಿ ಸಮುದ್ರ ಮಧ್ಯದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಯೋಜಿಸಿರುವುದಾಗಿ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

67ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಉತ್ಸಾಹದಿಂದ ಅರ್ಥಪೂರ್ಣವಾಗಿ ಆಯೋಜಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ ರವರ ಕಲ್ಪನೆಯ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಅಭಿಯಾನಕ್ಕೆ ಈ ಕಾರ್ಯಕ್ರಮ ಮೆರುಗು ನೀಡಲಿದೆ.

ಸಮುದ್ರ ಮಧ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಮೀನುಗಾರರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಸಂಗೀತ ಕಲಾವಿದರು ಹಾಗೂ ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಕನ್ನಡ ಗೀತೆಗಳ ಗಾಯನದ ಮೂಲಕ ಕಾರ್ಯಕ್ರಮ ನಡೆಯಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!