Wednesday, July 29, 2026
Wednesday, July 29, 2026

ಮಿರ್ಜಾ ಇಸ್ಮಾಯಿಲ್ ಹುಟ್ಟುಹಬ್ಬ ಆಚರಣೆ

ಮಿರ್ಜಾ ಇಸ್ಮಾಯಿಲ್ ಹುಟ್ಟುಹಬ್ಬ ಆಚರಣೆ

Date:

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಮಿರ್ಜಾ ಇಸ್ಮಾಯಿಲ್ ಇವರ ಹುಟ್ಟು ಹಬ್ಬವನ್ನು ಮಂಗಳವಾರ ಉಡುಪಿಯ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಆಚರಿಸಲಾಯಿತು.

ಮಿರ್ಜಾ ಇಸ್ಮಾಯಿಲ್ ಅವರ ಮಾನವೀಯ ಗುಣಗಳನ್ನು ಗೌರವ ಕಾರ್ಯದರ್ಶಿಯಾದ ಸುಬ್ರಹ್ಮಣ್ಯ ಶೆಟ್ಟಿ, ಕಾರ್ಯದರ್ಶಿ ಆನಂದ್ ಪಿ., ಹಾಗೂ ನರಸಿಂಹಮೂರ್ತಿ ಕೊಂಡಾಡಿದರು.

ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀನಾಥ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು.
ಆನಂದ್ ಪಿ. ಸ್ವಾಗತಿಸಿ, ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ. ಪಿ ವಂದಿಸಿದರು.

ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಸಂಘಟನಾ ಕಾರ್ಯದರ್ಶಿ ಸತೀಶ್ ವಡ್ದರ್ಸೆ, ಕಸಾಪ ಹೆಬ್ರಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಭಂಡಾರಿ, ತಾಲೂಕು ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಸುಭೋದ್ ಕುಮಾರ್, ಶಶಿಕಾಂತ್ ಶೆಟ್ಟಿ, ಈರಣ್ಣ ಕುರುವತ್ತಿ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!