Monday, January 20, 2025
Monday, January 20, 2025

ವಿಧಾನ ಪರಿಷತ್ ಚುನಾವಣೆ: ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ವಿಧಾನ ಪರಿಷತ್ ಚುನಾವಣೆ: ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

Date:

ಉಡುಪಿ: ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯಲಿರುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆ, ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ, ರಾಜ್ಯ ಅಬಕಾರಿ ಕಾಯ್ದೆ 1967 ಕಲಂ 10(ಬಿ) ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135(ಸಿ) ಅನ್ವಯ ಜಿಲ್ಲೆಯಾದ್ಯಂತ ಡಿಸೆಂಬರ್ 8 ರ ಸಂಜೆ 6 ಗಂಟೆಯಿಂದ ಡಿಸೆಂಬರ್ 10 ರ ಸಂಜೆ 6ರವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಹೋಟೆಲ್, ಕ್ಲಬ್‌ಗಳಲ್ಲಿ ಮದ್ಯ ಮಾರಾಟ, ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!