Tuesday, January 21, 2025
Tuesday, January 21, 2025

ಜಿಲ್ಲೆಯಾದ್ಯಂತ 14 ದಿನಗಳವರೆಗೆ ನಿರಂತರ ಕಾನೂನು ಜಾಗೃತಿ ಅಭಿಯಾನ

ಜಿಲ್ಲೆಯಾದ್ಯಂತ 14 ದಿನಗಳವರೆಗೆ ನಿರಂತರ ಕಾನೂನು ಜಾಗೃತಿ ಅಭಿಯಾನ

Date:

ಉಡುಪಿ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ನೆನಪಿಗಾಗಿ ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ, ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಅಕ್ಟೋಬರ್ 31 ರಿಂದ ನವೆಂಬರ್ 13 ರ ವರೆಗೆ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ NALSA Campaigns on “Empowerment of Citizens through Legal Awareness and Out reach’ and Haq_hamara_bhi_to_hai @ 75” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

2 ವಾರಗಳ ಈ ಅಭಿಯಾನದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗಳನ್ನು ತಲುಪುವ ಮತ್ತು ಪ್ರತಿಯೊಂದು ಉಪವಿಭಾಗದಲ್ಲಿ ಒಮ್ಮೆಯಾದರೂ ಕನಿಷ್ಟ ಒಂದು ಕಾರ್ಯಕ್ರಮವನ್ನು ವಕೀಲರು, ಅರೆಕಾಲಿಕ ಕಾನೂನು ಸ್ವಯಂ ಸೇವಕರು, ಕಾನೂನು ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಪೋಲಿಸರು, ಶಿಕ್ಷಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಾಂತರ ಜಿಲ್ಲೆಯ ಗ್ರಾಮೀಣ, ಬುಡಕಟ್ಟು ಮತ್ತು ದೂರದ ಪ್ರದೇಶಗಳಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪುವ ಬಗ್ಗೆ ಜಾಗೃತಿ ಹಾಗೂ ಪ್ರಚಾರದ ಚಟುವಟಿಕೆಗಳನ್ನು ಆಯೋಜಿಸುವ ಗುರಿಯನ್ನು ಹೊಂದಲಾಗಿದೆ. ಒಟ್ಟಾರೆಯಾಗಿ ಕಾನೂನು ಸೇವೆಗಳ ಉದ್ದೇಶವನ್ನು ಬಲಪಡಿಸುವುದು ಮತ್ತು ಕಾನೂನು ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿರುತ್ತದೆ.

ಈ ಅಭಿಯಾನವನ್ನು 31 ಅಕ್ಟೋಬರ್ 2022 ರಂದು ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿರುವ ಜಾಗೃತಿ ಅರಿವು ಸಪ್ತಾಹ 2022 ಮತ್ತು ಮಾನವ ಕಳ್ಳ ಸಾಗಣೆಯ ವಿರುದ್ದ ಜನ ಜಾಗೃತಿ ಅಭಿಯಾನದ ಸಂಬಂಧ ಬೋರ್ಡ್ ಹೈಸ್ಕೂಲ್‌ನಿಂದ ಬೈಕ್ ರ‍್ಯಾಲಿ ನಡೆಸುವ ಮೂಲಕ ಉದ್ಘಾಟಿಸಲಾಗುವುದು. ದೇಶದ ಎಲ್ಲಾ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಕಾರ‍್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಈ ಅಭಿಯಾನವು 13ನೇ ನವೆಂಬರ್ 2022 ರಂದು ಮುಕ್ತಾಯಗೊಳ್ಳಲಿದೆ. ಈ ಅಭಿಯಾನವನ್ನು ಸದುಪಯೋಗಪಡಿಸಿಕೊಂಡು ಯಶಸ್ವಿಗೊಳಿಸುವಲ್ಲಿ ಜಿಲ್ಲೆಯ ನಾಗರಿಕರು ಸಹಕರಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!