ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಮಣಿಪಾಲ ವ್ಯಾಪ್ತಿಯ ಪೆರಂಪಳ್ಳಿ, ಕಕ್ಕುಂಜೆ ಹಾಗೂ ನಿಟ್ಟೂರು ವ್ಯಾಪ್ತಿಯ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ಇಂದು ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 48 ಪ್ರಕರಣ ದಾಖಲಿಸಿ 5900 ರೂ. ದಂಡ ವಸೂಲಿ ಮಾಡಲಾಯಿತು.
ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಮಣಿಪಾಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ನವೀನ್, ಪಿ.ಸಿ ಸಲ್ಮಾನ್ ಖಾನ್, ಜಿಲ್ಲಾ ಆಸ್ಪತ್ರೆಯ ಮನಃಶಾಸ್ತ್ರಜ್ಞ ದಿನೇಶ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.