Friday, September 20, 2024
Friday, September 20, 2024

ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ ಅಗತ್ಯ: ದಯಾನಂದ ಶೆಟ್ಟಿ

ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ ಅಗತ್ಯ: ದಯಾನಂದ ಶೆಟ್ಟಿ

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐ.ಕ್ಯೂ.ಎ.ಸಿ. ಹಾಗೂ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣೆ ವಿಭಾಗದ ಸಹಯೋಗದಲ್ಲಿ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಕಾಲೇಜು ಅಭಿವೃದ್ಧಿ ಸಮಿತಿಯ ಖಜಾಂಚಿಗಳಾದ ದಯಾನಂದ ಶೆಟ್ಟಿ ಕೊಜಕುಳಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಜ್ಞಾನವೊಂದಿದ್ದರೆ ಸಾಲದು, ಜ್ಞಾನದ ಬಳಕೆಗೆ
ಅವಶ್ಯಕವಾದ ಸಂವಹನ ಕೌಶಲಗಳು ಮತ್ತು ಬದುಕಿನ ಸವಾಲುಗಳನ್ನು ಎದುರಿಸುವ ಕೌಶಲಗಳು ತುಂಬಾ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಬಿ.ಎ. ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಡಾ. ಚಂದ್ರಶೇಖರ ಕೆ., ಕಾರ್ಯದರ್ಶಿ ನಂದಕಿಶೋರ್ ಹಾಗೂ ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು.

ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ತಿಮ್ಮಣ್ಣ ಜಿ. ಭಟ್ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಡಾ. ಉದಯ ಶೆಟ್ಟಿ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಮೇಶ್ ಪೈ ವಂದಿಸಿದರು. ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!