Saturday, September 21, 2024
Saturday, September 21, 2024

ಜ್ಞಾನಸುಧಾ: ರಾ.ಸೇ.ಯೋ. ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

ಜ್ಞಾನಸುಧಾ: ರಾ.ಸೇ.ಯೋ. ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Date:

ಕುಕ್ಕುಂದೂರು: ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಎನ್.ಎಸ್.ಎಸ್.ನ ಪಾತ್ರವು ಮುಖ್ಯವಾಗಿದೆ. ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಸಿಗುವ ಅನುಭವ ತಮ್ಮ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್.ಎಂ.ಕೊಡವೂರ್ ಹೇಳಿದರು.

ಅವರು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ರಾ.ಸೇ.ಯೋ. ಘಟಕದ ವತಿಯಿಂದ ಕುಕ್ಕುಂದೂರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಇದೇ ಸಂದರ್ಭ ಶಿಬಿರಾರ್ಥಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. 2022-23ನೇ ಸಾಲಿನ ಉತ್ತಮ ಎನ್.ಎಸ್.ಎಸ್ ಸ್ವಯಂಸೇವಕರಾಗಿ ಬ್ರಾಯನ್ ವಿಕ್ಕಿ ಡಿ’ಸೋಜ ಮತ್ತು
ವರ್ಷಾ ಹೊರಹೊಮ್ಮಿದರು.

ಕುಕ್ಕುಂದೂರು ಗ್ರಾ.ಪಂ.ಸದಸ್ಯ ರೆಹಮುತುಲ್ಲಾ, ಶ್ರೀ ದುರ್ಗಾದೇವಿ ಅ.ಹಿ.ಪ್ರಾ.ಶಾಲೆಯ ಸಂಚಾಲಕ ರಾಜೇಂದ್ರ ಬಳ್ಳಾಳ್, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಕಮಲಾಕ್ಷ ನಾಯಕ್, ಮುಖ್ಯೋಪಾಧ್ಯಾಯಿನಿ ಸುಜಾತ. ಎನ್. ರಾಜ್, ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಉಡುಪಿ ಜ್ಞಾನಸುಧಾ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉದ್ಯಮಿಗಳಾದ ತ್ರಿವಿಕ್ರಮ ಕಿಣಿ, ದೇವೇಂದ್ರ ನಾಯಕ್, ವಿಠಲ್ ಸದನದ ವಿಠಲ ಶೆಟ್ಟಿ, ಎನ್ ಎಸ್. ಎಸ್. ವಿದ್ಯಾರ್ಥಿ ನಾಯಕರಾದ ಪ್ರಸನ್ನ, ಸ್ವಾತಿ ಶೆಟ್ಟಿ ಉಪಸ್ಥಿತರಿದ್ದರು. ಸಹ ಶಿಬಿರಾಧಿಕಾರಿ ಶಮಿತಾ ಕಾರ್ಯಕ್ರಮ ನಿರೂಪಿಸಿ, ಮುಖ್ಯ ಶಿಬಿರಾಧಿಕಾರಿ ರವಿ ಜಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!