ಉಡುಪಿ: ಪ್ರಜಾಸತಾತ್ಮಕವಾಗಿ ಚುನಾವಣೆ ನಡೆಯುವುದರೊಂದಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆಯವರು ಆಯ್ಕೆಯಾಗಿರುತ್ತಾರೆ. 9 ಬಾರಿ ಶಾಸಕರಾಗಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ, ಕೇಂದ್ರ ಸಚಿವರಾಗಿ ಅನುಭವ ಹೊಂದಿದ ಖರ್ಗೆಯವರು ತಮ್ಮ ಅವಧಿಯಲ್ಲಿ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದಾರೆ.
ಖರ್ಗೆಯವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಪ್ರಥಮ ಬಾರಿಗೆ ರಾಜ್ಯಕ್ಕೆ ನವಂಬರ್ 6 ರಂದು ಆಗಮಿಸಲಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸುವ ಚಿಂತನೆ ನಡೆದಿದೆ ಎಂದು ಎಐಸಿಸಿ ಕಾರ್ಯದರ್ಶಿಗಳು, ಮೈಸೂರು ವಿಭಾಗದ ಉಸ್ತುವಾರಿಗಳಾದ ಶಾಸಕ ರೋಝಿ ಜೋನ್ ಹೇಳಿದರು. ಅವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರಗಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದರು.
ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ ದುರಾಡಳಿತದಿಂದ ಜನತೆ ಸಂಪೂರ್ಣ ರೋಸಿ ಹೋಗಿದ್ದು, ಜನತೆಯನ್ನು ಲೂಟಿ ಮಾಡಿದ್ದೇ ಸರಕಾರದ ಸಾಧನೆಯಾಗಿದೆ. ಜನತೆ ಬದಲಾವಣೆ ಬಯಸಿದ್ದು, ಪಕ್ಷಕ್ಕೆ ಪೂರಕ ವಾತಾವರಣವಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮಾತನಾಡುತ್ತಾ, ಖರ್ಗೆಯವರು ಅಧ್ಯಕ್ಷರಾದ ನಂತರ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದು, ಅವರ ಸ್ವಾಗತ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರು. ಚುನಾವಣೆ ಸಮೀಪಿಸುತ್ತಿದ್ದು, ಸಂಘಟನೆಯನ್ನು ಚುರುಕುಗೊಳಿಸಲಾಗುವುದು, ಜಿಲ್ಲೆಯ ಐದೂ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಗೊಂಡಿದೆ ಎಂದರು.
ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಅಭಯಚಂದ್ರ ಜೈನ್, ಖರ್ಗೆಯವರ ಸ್ವಾಗತ ಸಮಾರಂಭದ ಕಾರ್ಯಕ್ರಮದ ಬಗ್ಗೆ ವಿವರಿಸಿ, ಪಕ್ಷ ಸಂಘಟನೆ ಬಗ್ಗೆ ಸಲಹೆ ಸೂಚನೆ ನೀಡಿದರು. ಇತ್ತೀಚೆಗೆ ನಿಧನರಾದ ನಗರಸಭಾ ಸದಸ್ಯೆ ಸೆಲಿನಾ ಕರ್ಕಡ ಪೆರಂಪಳ್ಳಿ, ಐತಪ್ಪ ಕರ್ಕೇರ, ಜಯರಾಮ್ ಆಚಾರಿ ಕಾರ್ಕಳ, ಶೇಖ್ ಉಮ್ಮ ಬ್ರಹ್ಮಾವರ, ವಿಟ್ಟಪ್ಪ ನಾಯಕ್ ಕಾಪು, ಸಂತೋಷ್ ಕುಂದರ್ ಕೋಟ ಇವರುಗಳಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ನುಡಿ ನಮನ ಸಲ್ಲಿಸಿದರು.
ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆರೈಬೆಟ್ಟು ವಾರ್ಡಿನ ಉಪಚುನಾವಣೆ ಫಲಿತಾಂಶ ನಂತರ ನಡೆದ ವಿಜಯೋತ್ಸವ ಸಂದರ್ಭ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ವಿರುದ್ಧ ನಡೆದ ಘಟನೆಯನ್ನು ಖಂಡಿಸಿ ನಿರ್ಣಯ ತೆಗೆದುಕೊಳ್ಳಲಾಯಿತು.
ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಎಮ್.ಎ.ಗಫೂರ್, ಮಲ್ಯಾಡಿ ಶಿವರಾಮ ಶೆಟ್ಟಿ, ಗೀತಾ ವಾಗ್ಳೆ, ವೆರೋನಿಕಾ ಕರ್ನೇಲಿಯೋ, ನವೀನ್‍ಚಂದ್ರ ಶೆಟ್ಟಿ, ದಿನೇಶ್ ಪುತ್ರನ್, ಪ್ರಸಾದ್ ರಾಜ್ ಕಾಂಚನ್, ಬ್ಲಾಕ್ ಅಧ್ಯಕ್ಷರುಗಳಾದ ಹರಿಪ್ರಸಾದ್ ಶೆಟ್ಟಿ, ಶಂಕರ್ ಕುಂದರ್, ನವೀನ್ ಚಂದ್ರ ಸುವರ್ಣ, ರಮೇಶ್ ಕಾಂಚನ್, ಪ್ರದೀಪ್ ಕುಮಾರ್ ಶೆಟ್ಟಿ, ಸದಾಶಿವ ದೇವಾಡಿಗ, ಸಂತೋಷ್ ಕುಲಾಲ್ ಹಾಗೂ ಪಕ್ಷದ ಮುಖಂಡರುಗಳಾದ ಕಾಪು ದಿವಾಕರ ಶೆಟ್ಟಿ, ಶ್ಯಾಮಲಾ ಭಂಡಾರಿ, ದೇವಕಿ ಸಣ್ಣಯ್ಯ, ರಾಜು ಪೂಜಾರಿ, ದೀಪಕ್ ಕೋಟ್ಯಾನ್, ಅಬೀಬ್ ಆಲಿ, ವಾಸುದೇವ ಯಡಿಯಾಳ್, ಹರೀಶ್ ಕಿಣಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮುರಲಿ ಶೆಟ್ಟಿ, ಪ್ರಖ್ಯಾತ ಶೆಟ್ಟಿ, ಪ್ರಶಾಂತ ಜತ್ತನ್ನ, ರೋಶನಿ ಒಲಿವರಾ, ಬಿಪಿನ್ ಚಂದ್ರಪಾಲ್ ನಕ್ರೆ, ಕೀರ್ತಿ ಶೆಟ್ಟಿ, ಶಬ್ಬಿರ್ ಆಹ್ಮದ್, ಇಸ್ಮಾಯಿಲ್ ಆತ್ರಾಡಿ, ಬಾಲಕೃಷ್ಣ ಪೂಜಾರಿ, ರೋಶನ್ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳ್, ಉಪೇಂದ್ರ ಮೆಂಡನ್, ಜಯಕುಮಾರ್, ಸೌರಭ ಬಲ್ಲಾಳ್, ಎಲ್ಲೂರು ಶಶಿಧರ ಶೆಟ್ಟಿ, ಕೇಶವ ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ವೈ ಸುಕುಮಾರ್, ಸುಜಯ ಆಚಾರ್ಯ, ಸುರೇಶ್ ಶೆಟ್ಟಿ, ಬನ್ನಂಜೆ, ಉಪೇಂದ್ರ, ರಾಜೇಶ್ ಮೆಂಡನ್ ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಶಲ ಶೆಟ್ಟಿ ಸ್ವಾಗತಿಸಿ, ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಧನ್ಯವಾದವಿತ್ತರು. ವಕ್ತಾರ ಭಾಸ್ಕರ ರಾವ್ ಕಿದಿಯೂರು ಹಾಗೂ ಪ್ರ.ಕಾರ್ಯದರ್ಶಿ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು.