Tuesday, July 28, 2026
Tuesday, July 28, 2026

ನ. 19- ಜಿಲ್ಲಾಮಟ್ಟದ ಯುವಜನೋತ್ಸವ

ನ. 19- ಜಿಲ್ಲಾಮಟ್ಟದ ಯುವಜನೋತ್ಸವ

Date:

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವು ನವೆಂಬರ್ 19 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಹಾಗೂ ಜಾನಪದ ಹಾಡು (ಗುಂಪು ಸ್ಪರ್ಧೆ), ಏಕಾಂಕ ನಾಟಕ (ಹಿಂದಿ, ಇಂಗ್ಲೀಷ್, ಕನ್ನಡ-ವೈಯಕ್ತಿಕ ಸ್ಪರ್ಧೆ), ಶಾಸ್ತ್ರೀಯ ಗಾಯನಗಳಾದ ಹಿಂದೂಸ್ಥಾನಿ ಸಂಗೀತ ಹಾಗೂ ಕರ್ನಾಟಕ ಸಂಗೀತ, ಶಾಸ್ತ್ರೀಯ ವಾದ್ಯಗಳಾದ ತಬಲಾ, ಸಿತಾರ್, ಕೊಳಲು, ವೀಣೆ ಹಾಗೂ ಮೃದಂಗ, ಹಾರ್ಮೋನಿಯಂ, ಗಿಟಾರ್, ಶಾಸ್ತಿçÃಯ ನೃತ್ಯಗಳಾದ ಭರತನಾಟ್ಯ, ಒಡಿಸ್ಸಿ, ಮಣಿಪುರಿ, ಕಥಕ್ ಹಾಗೂ ಕೂಚುಪುಡಿ, ಕನ್ನಡ, ಹಿಂದಿ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಆಶುಭಾಷಣ (ವೈಯಕ್ತಿಕ) ಸ್ಪರ್ಧೆಗಳನ್ನು ನಡೆಸಲಾಗುವುದು.

15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರು ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಸ್ಪರ್ಧಿಗಳು ವಯಸ್ಸಿನ ದೃಢೀಕರಣ ಪತ್ರ (ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಜನನ ಪ್ರಮಾಣಪತ್ರದ ಪ್ರತಿ) ವನ್ನು ಹಾಜರುಪಡಿಸಬೇಕು.

ಸ್ಪರ್ಧಾಳುಗಳು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಬೆಳಗ್ಗೆ 9 ಗಂಟೆಯ ಒಳಗೆ ಸಂಘಟಕರಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ :0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!